ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಕಾರು ಪಲ್ಟಿ : ನಾಲ್ವರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದ್ದು, ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಚಿಕ್ಕಮಗಳೂರು ತಾಲೂಕಿನ ಅಲ್ಲಂ ಪುರ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಮರಕ್ಕೆ ಗುದ್ದಿದರಭಸಕ್ಕೆ ಪಲ್ಟಿಯಾಗಿ ಕಾರು ಕಾಲುವಿಗೆ ಬಿದ್ದಿದೆ. ಕಾರಿನಲ್ಲಿದ್ದ ಚಿಕ್ಕಮಂಗಳೂರು ಸಮೀಪದ ದಾಸರಹಳ್ಳಿ ನಿವಾಸಿಗಳಿಗೆ ಗಂಭೀರವಾದ ಗಾಯಗಳಾಗಿವೆ. ಅಪಘಾತದ ಕುರಿತು ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.