ಚಿಕ್ಕಮಗಳೂರು : ರೈತರಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ರೈತರಿಂದ 20 ಕ್ವಿಂಟಲ್ ಕೊಬ್ಬರಿ ಖರೀದಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಸೂಚನೆ ನೀಡಿದ್ದಾರೆ.
BIG NEWS: ರೈತರ ಸಾಲ ಮನ್ನಾ ಮಾಡಿದ್ರೇ ದೇಶಕ್ಕೆ ಯಾವುದೇ ಉಪಯೋಗವಿಲ್ಲ: ಸಂಸದ ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2022-23ನೇ ಸಾಲಿಗೆ ಎಫ್.ಎ.ಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿಯನ್ನು ಪ್ರತಿ ಕ್ವಿಂಟಲ್‌ಗೆ 11,750 ರೂಪಾಯಿನಂತೆ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್‌ವರೆಗೆ ಕೊಬ್ಬರಿ ಖರೀದಿಗೆ ಸೂಚಿಸಲಾಗಿದೆ. ಈ ಮೂಲಕ ರೈತರಿಗೆ ಉತ್ತೇಜನ ನೀಡಲು ಜಿಲ್ಲಾಧಿಕಾರಿ ಮುಂದಾಗಿದ್ದಾರೆ.
BIG NEWS: ರೈತರ ಸಾಲ ಮನ್ನಾ ಮಾಡಿದ್ರೇ ದೇಶಕ್ಕೆ ಯಾವುದೇ ಉಪಯೋಗವಿಲ್ಲ: ಸಂಸದ ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ
ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಉಂಡೆ ಕೊಬ್ಬರಿ ಖರೀದಿ ಸಂಬಂಧ ನಫೆಡ್ ಹಾಗೂ ಎ.ಪಿ.ಎಂ.ಸಿ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಸಂಬಂಧ ಜನವರಿ27 ರಂದು ಸರ್ಕಾರ ಆದೇಶ ಹೊರಡಿಸಿದ್ದು, ಆದೇಶ ಹೊರಡಿಸಿದ ದಿನದಿಂದ ರೈತರ ನೋಂದಾಣಿ ಕಾಲವಧಿಯನ್ನು 45 ದಿನಗಳ ವರೆಗೆ ನಿಗದಿಗೊಳಿಸಲಾಗಿದ್ದು, ನೋಂದಣಿ ಕಾರ್ಯದೊಂದಿಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು.
BIG NEWS: ರೈತರ ಸಾಲ ಮನ್ನಾ ಮಾಡಿದ್ರೇ ದೇಶಕ್ಕೆ ಯಾವುದೇ ಉಪಯೋಗವಿಲ್ಲ: ಸಂಸದ ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ
ಪ್ರತಿ ಎಕರೆಗೆ 6 ಕ್ವಿಂಟಲ್, ಗರಿಷ್ಠ 20 ಕ್ವಿಂಟಲ್ ಕೊಬ್ಬರಿ ಖರೀದಿ ಪ್ರಮಾಣ ನಿಗದಿಪಡಿಸಲಾಗಿದ್ದು, ಜಿಲ್ಲೆಯ ಕಡೂರು ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆಯ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಖರೀದಿ ಕೇಂದ್ರವನ್ನು ತೆರೆದು ಕೊಬ್ಬರಿ ಖರೀದಿಸಲು ಸೂಕ್ತ ವ್ಯವಸ್ಥೆ ಮಾಡುವಂತೆ ತಿಳಿಸಿದರು.
BIG NEWS: ರೈತರ ಸಾಲ ಮನ್ನಾ ಮಾಡಿದ್ರೇ ದೇಶಕ್ಕೆ ಯಾವುದೇ ಉಪಯೋಗವಿಲ್ಲ: ಸಂಸದ ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ
ಈ ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕರು, ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.
BIG NEWS: ರೈತರ ಸಾಲ ಮನ್ನಾ ಮಾಡಿದ್ರೇ ದೇಶಕ್ಕೆ ಯಾವುದೇ ಉಪಯೋಗವಿಲ್ಲ: ಸಂಸದ ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ