ಚಿಕ್ಕಮಗಳೂರು : ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ನಾಲ್ವರು ಶಿಕ್ಷಕರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ಶೃಂಗೇರಿ ತಾಲೂಕಿನ ಕುಂಚೆಬೈಲು ಗಣಪತಿ ದೇಗುಲ ಬಳಿ ಈ ಒಂದು ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕುಂಚೆಬೈಲು ಗ್ರಾಮದಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರು ಪಲ್ಟಿಯಾಗಿದೆ. ಕೊಗ್ರೆ ಸರ್ಕಾರಿ ಶಾಲೆಯ ಶಿಕ್ಷಕರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಈ ಒಂದು ಘಟನೆ ಕುರಿತು ಪ್ರಕರಣ ದಾಖಲಾಗಿದೆ.