ಚಿಕ್ಕಮಗಳೂರು : ರಾಜ್ಯದ ಹಲವೆಡೆ ಇಂದು ಭಾರಿ ಮಳೆಯಾಗುತ್ತಿದ್ದು, ಅದರಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದ ಆಟೋ ಒಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲನೊಬ್ಬ ಸಾವನ್ನಪ್ಪಿರುವ ಘಟನೆ ಬಣಕಲ್- ಕೊಟ್ಟಿಗೆಹಾರ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ನಲ್ಲಿ ನಡೆದಿದೆ. ಮೃತ ಪಟ್ಟ ಚಾಲಕನನ್ನು ರವಿ ಎಂದು ಹೇಳಲಗುತ್ತಿದ್ದೂ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮೈಲಿಮನೆ ನಿವಾಸಿ ಎಂದು ಹೇಳಲಾಗುತ್ತಿದೆ.
ತಕ್ಷಣ ಆಟೋ ಪಲ್ಟಿಯಾಗಿದ್ದರಿಂದ ಗಂಭೀರ ಗಾಯಗೊಂಡಿದ್ದ ರವಿನನ್ನು ಮೂಡಿಗೆರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯ ಸಾವನನಪ್ಪಿದ್ದಾನೆ. ಘಟನೆ ಕುರಿತಂತೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.