ಚಿಕ್ಕಮಗಳೂರು : ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ಚಿಕ್ಕಮಂಗಳೂರು ದಕ್ಷಿಣಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ನಲ್ಲಿ ಇದೀಗ ಭೂ ಕುಸಿತ ಉಂಟಾಗಿದೆ.
ಹೌದು ಚಾರ್ಮಾಡಿ ಘಾಟ್ ನಲ್ಲಿ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಭೂಕುಸಿತ ಉಂಟಾಗಿದೆ. ಚಿಕ್ಕಮಗಳೂರು ದಕ್ಷಿಣ ಕನ್ನಡ ಜಿಲ್ಲೆಯ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ ಅಲೆಖಾನ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇದೀಗ ಭೂ ಕುಸಿತ ಉಂಟಾಗಿದೆ. ಘಟನಾ ಸ್ಥಳಕ್ಕೆ ಬಣಕಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಳೆ ಮುಂದುವರಿದರೆ ಇನ್ನಷ್ಟು ಭೂಕುಸಿತ ಉಂಟಾಗುವ ಸಾಧ್ಯತೆಯಿದೆ ಎನ್ನಲಾಗಿದೆ.