ಚಿಕ್ಕಮಗಳೂರು : ಕೌಟುಂಬಿಕ ಕಲಹಕ್ಕೆ ಬೇಸತ್ತ ವ್ಯಕ್ತಿಯೊಬ್ಬ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಬಳಿ ಈ ಒಂದು ಘಟನೆ ನಡೆದಿದೆ. ಪಾಳು ಬಿದ್ದ ಬಸ್ ನಿಲ್ದಾಣದಲ್ಲಿ ಮೋಹನ್ (37) ನೇಣಿಗೆ ಶರಣಾಗಿದ್ದಾನೆ.
ಚಿಕ್ಕಮಗಳೂರು ನಗರದ ಕೆಂಪನಹಳ್ಳಿ ನಿವಾಸಿಯಾಗಿರುವ ಮೋಹನ್, 6 ವರ್ಷಗಳ ಹಿಂದೆ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗಿದ್ದ. ಚಿಕ್ಕಮಗಳೂರು ಮೆಡಿಕಲ್ ಶಾಪ್ ನಲ್ಲಿ ಮೋಹನ್ ಕೆಲಸ ಮಾಡುತ್ತಿದ್ದ. ಈ ಕುರಿತು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.