ಚಿಕ್ಕಮಗಳೂರು:ಚಲಿಸುತ್ತಿದ್ದ ರೈಲಿನಡಿ ಬಿದ್ದು ಶಾಲಾ ಬಸ್ ಚಾಲಕ ಮತ್ತು ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಜ್ಜಂಪುರ ತಾಲೂಕಿನ ಗಿರಿಯಾಪುರ ಗ್ರಾಮದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಖಾಸಗಿ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.
ಚಾಲಕನು ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದನುಮೀ ಬಗ್ಗೆ ಪಾಲಕರು ಶಾಲಾ ಆಡಳಿತ ಮಂಡಳಿಗೆ ದೂರು ನೀಡಿದ್ದರೂ ಸಂತೋಷ್ ವಿರುದ್ಧ ಆಡಳಿತ ಮಂಡಳಿ ಕ್ರಮ ಕೈಗೊಂಡಿರಲಿಲ್ಲ.
ಮೃತ ಜಾನವಿ ಅಜ್ಜಂಪುರ ತಾಲೂಕಿನ ಗಿರಿಯಾಪುರ ಗ್ರಾಮದ ಜ್ಞಾನದೀಪ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಸಂತೋಷ್ ಕೂಡ ಇದೇ ಶಾಲೆಯಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದನು.
ಡಿಸೆಂಬರ್ 31 ರಂದು ಹೊಸ ವರ್ಷದ ಪಾರ್ಟಿಗೆ ಹೋಗುತ್ತೇನೆ ಎಂದು ಹೋಗಿದ್ದ ಜಾನವಿ ಶವವಾಗಿ ಪತ್ತೆಯಾಗಿದ್ದಾಳೆ.ಜಾನವಿಯನ್ನು ಸಂತೋಷ್ ತನ್ನ ಜೊತೆ ಕರೆದೊಯ್ದಿದ್ದನು. ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯ ರೈಲ್ವೆ ಹಳಿ ಮೇಲೆ ಇಬ್ಬರ ಮೃತದೇಹ ರುಂಡ ಮತ್ತು ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇಬ್ಬರು ರೈಲಿನಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಅಜ್ಜಂಪುರ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.