ಚಿಕ್ಕಮಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನೀಟ್ಟಾಗಿ ಪಾಲಿಸುತ್ತಿದ್ದು, ಅಕ್ರಮವಾಗಿ ಸಾಗಿಸುತವ ಹಣ ಮದ್ಯದ ಮೇಲೆ ಚುನಾವಣೆ ಅಧಿಕಾರಿಗಳು ಕಣ್ಣಿಟ್ಟಿದ್ದು, ಇದೀಗ ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಅಕ್ರಮವಾಗಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಜೈನ್ ರಸ್ತೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ಹಣ ಜಪ್ತಿ ಮಾಡಿಕೊಂಡಿದ್ದಾರೆ. ರಾತ್ರಿ ಜೈನ್ ನಗರ ರಸ್ತೆಯಲ್ಲಿ ಇಬ್ಬರು ವ್ಯಕ್ತಿಗಳು ಕಾರು ನಿಲ್ಲಿಸಿಕೊಂಡಿದ್ದರು ಈ ವೇಳೆ ಕಾರು ತಪಾಸನೆ ನಡೆಸಿದ ಅಧಿಕಾರಿಗಳಿಗೆ ವೇಳೆ 13.10 ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.