ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿ ಮುಂದುವರೆದಿದ್ದು, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದೆ. ಕಾಡಾನೆ ದಾಳಿಯಿಂದ ಕಾರ್ಮಿಕ ಯಲ್ಲಪ್ಪ (50) ಸಾವನಪ್ಪಿದ್ದಾನೆ.
ನಾಗೇಶ್ ಗೌಡ ಎಂಬುವವರ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಚಿಕ್ಕಮಂಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.








