ಚಿಕ್ಕಮಗಳೂರು : 21ನೇ ಶತಮಾನದಲ್ಲೂ ಕೂಡ ಇಂದಿಗೂ ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಮೂಡನಂಬಿಕೆ ಪಾಲಿಸುವ ಅದೆಷ್ಟೋ ಘಟನೆಗಳು ನಡೆದಿದೆ. ಇದೀಗ ಚಿಕ್ಕಮಂಗಳೂರಲ್ಲೂ ಕೂಡ ಅಂತಹ ಘಟನೆ ನಡೆದಿದ್ದು, ಬಾಲ್ಯ ವಿವಾಹದ ಕುರಿತು ಮಾಹಿತಿ ನೀಡಿದ್ದಕ್ಕೆ ಗ್ರಾಮದ ಅಂಗನವಾಡಿ ಶಿಕ್ಷಕಿಯನ್ನು ಗ್ರಾಮಸ್ಥರು ಬಹಿಷ್ಕಾರ ಹಾಕಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಎರೇಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ.
ಯರೆಹಳ್ಳಿ ಅಂಗನವಾಡಿ ಶಿಕ್ಷಕಿ ಕುಟುಂಬಕ್ಕೆ ಬಹಿಷ್ಕಾರ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ಬೀರೂರು ಠಾಣೆ ಪೊಲೀಸರು ಗ್ರಾಮಸ್ಥರ ಜೊತೆ ಸಭೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಎರೇಹಳ್ಳಿ ಗ್ರಾಮದಲ್ಲಿ ತರೀಕೆರೆ ಡಿವ ಎಸ್ ಪಿ ಹಾಲಮೂರ್ತಿ ರಾವ್ ನೇತೃತ್ವದಲ್ಲಿ ಇದೀಗ ಸಭೆ ನಡೆಸಲಾಗುತ್ತಿದೆ ಅಂಗನವಾಡಿ ಶಿಕ್ಷಕಿ ಕುಟುಂಬ ಸೇರಿ ಮೂರು ಕುಟುಂಬಕ್ಕೆ ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದಾರೆ.ತೇಜಸ್ವಿನಿ ಕುಟುಂಬಕ್ಕೆ ಗ್ರಾಮದ ಮುಖಂಡರು ಬಹಿಷ್ಕಾರ ಹಾಕಿದ್ದಾರೆ ಬಾಲ್ಯ ವಿವಾಹದ ಬಗ್ಗೆ ಮಾಹಿತಿ ನೀಡಿದ್ದಕ್ಕೆ ತೇಜಸ್ವಿನಿ ಕುಟುಂಬಕ್ಕೆ ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದರು. ಇದೀಗ ಗ್ರಾಮಕ್ಕೆ ಭೇಟಿ ನೀಡಿ ಪೊಲೀಸರು ಸಭೆ ನಡೆಸುತ್ತಿದ್ದಾರೆ.