ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಯ ಸಹೋದರಿ ಹಾಗೂ ಸಹೋದರ ಇಬ್ಬರು ಸೇರಿ ತುರ್ತು ಸೇವಾ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯನ ಮೇಲೆ ಹಲ್ಲೆ ನಡೆಸಿದ್ದರು. ಇದೀಗ ಇಬ್ಬರು ಆರೋಪಿಗಳನ್ನು ನಗರ ಠಾಣೆಯ ಪೊಲೀಸರು ಬಂಧಿಸಿದ್ದು, ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಹೌದು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯನ ಮೇಲೆ ಹಲ್ಲೆ ವೈದ್ಯ ವೆಂಕಟೇಶ ಮೇಲೆ ಹಲ್ಲೆಗೈದಿದ್ದ ತಸೀಮಾ ಮತ್ತು ಇರ್ಫಾನ್ ನನ್ನು ಬಂಧಿಸಿದ್ದಾರೆ. ಬಂಧಿತರು ಚಿಕ್ಕಮಂಗಳೂರು ನಗರದ ಟಿಪ್ಪು ಬಡಾವಣೆಯ ನಿವಾಸಿಗಳು ಎಂದು ತಿಳಿದುಬಂದಿದೆ.ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ಈ ಒಂದು ಘಟನೆ ನಡೆದಿತ್ತು. ತುರ್ತು ಸೇವೆ ಘಟಕದಲ್ಲಿದ್ದ ವೆಂಕಟೇಶ ಮೇಲೆ ಹಲ್ಲೆ ಮಾಡಿದ್ದರು. ರೋಗಿಯ ಸಹೋದರಿ ತಸೀಮಾಳಿಂದ ವೆಂಕಟೇಶ್ ಮೇಲೆ ಹಲ್ಲೆ ನಡೆಸಲಾಗಿತ್ತು. ಅಲ್ಲೇಯನ್ನು ಖಂಡಿಸಿ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆ, ಬಳಿ ಇದೀಗ ಪ್ರತಿಭಟನೆ ಮುಂದುವರೆದಿದೆ OPD ಬಂದ್ ಮಾಡಿ ವೈದ್ಯರು ಮತ್ತು ಸಿಬ್ಬಂದಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.