ಚಿಕ್ಕಮಗಳೂರು : ರಸ್ತೆಯಲ್ಲಿ ವೇಗವಾಗಿ ಬೈಕ್ ಚಲಾಯಿಸುತ್ತಿದ್ದಾಗ ನಿಯಂತ್ರಣಕ್ಕೆ ಸಿಗದೇ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳುರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕರಗುಂದ ಗ್ರಾಮದಲ್ಲಿ ನಡೆದಿದೆ.
ಮೃತ ಸವಾರರನ್ನು ಹೊರನಾಡು ಗ್ರಾಮದ ಉಮೇಶ್, ಮುಂಡುಗದ ಮನೆ ಗ್ರಾಮದ ಸುನಿಲ್ ಮೃತಪಟ್ಟ ಯುವಕರು ಎಂದು ಹೇಳಲಾಗುತ್ತಿದೆ.ಉಮೇಶ್, ಸುನೀಲನನ್ನು ಶಿವಮೊಗ್ಗಕ್ಕೆ ಬಿಡಲು ಬೈಕ್ನಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ತಿರುವಿನಲ್ಲಿ ಬೈಕ್ ನಿಯಂತ್ರಣಕ್ಕೆ ಸಿಗದೇ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.
ಘಟನಾ ನಂತರ ಸ್ಥಳಕ್ಕೆ ಎನ್.ಆರ್ ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಎನ್.ಆರ್ ಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ಕುರಿತಂತೆ ಎನ್.ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.