ಬೆಂಗಳೂರು: ರಾಜ್ಯದಲ್ಲಿ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಜನವರಿ 2025ರಿಂದ ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯ್ತಿ ಅಭಿಯಾನವನ್ನು ಸರ್ಕಾರ ಆರಂಭಿಸಲಾಗುತ್ತಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಗ್ರಾಮೀಣ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಶ್ರಮಿಸುತ್ತಿದ್ದು, ಅದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನವನ್ನು ಆರಂಭಿಸಿದೆ ಎಂದಿದೆ.
ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ʼಮಕ್ಕಳ ವಿಶೇಷ ಗ್ರಾಮಸಭೆʼ, ಮಕ್ಕಳ ಜನನ ನೋಂದಣಿ, ಪೌಷ್ಟಿಕತೆಯ ಕುರಿತು ಜಾಗೃತಿ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಅಭಿಯಾನಗಳು, ಮಕ್ಕಳ ಕ್ರೀಡಾಕೂಟಗಳು, ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದೆ.
ಜೊತೆಗೆ ಮಕ್ಕಳ ಬೇಡಿಕೆ / ಪ್ರಶ್ನೆ / ದೂರುಗಳನ್ನು ʼಮಕ್ಕಳ ದನಿ ಪೆಟ್ಟಿಗೆʼಯ ಮೂಲಕ ಸ್ವೀಕರಿಸಿ, ಮಕ್ಕಳ ವಿಶೇಷ ಗ್ರಾಮಸಭೆಯಲ್ಲಿ ಚರ್ಚಿಸಿ ಪರಿಹರಿಸಲಾಗುತ್ತಿದೆ. ಗ್ರಾಮೀಣ ಮಕ್ಕಳ ಅಭ್ಯುದಯಕ್ಕೆ ರಾಜ್ಯ ಸರ್ಕಾರ ಸದಾ ಬದ್ಧವಾಗಿದೆ ಎಂದು ತಿಳಿಸಿದೆ.
ಗ್ರಾಮೀಣ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಶ್ರಮಿಸುತ್ತಿದ್ದು, ಅದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನವನ್ನು ಆರಂಭಿಸಿದೆ.
ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ʼಮಕ್ಕಳ ವಿಶೇಷ ಗ್ರಾಮಸಭೆʼ, ಮಕ್ಕಳ ಜನನ ನೋಂದಣಿ, ಪೌಷ್ಟಿಕತೆಯ ಕುರಿತು ಜಾಗೃತಿ, ಶಾಲೆಯಿಂದ… pic.twitter.com/zGLUwaWmWq
— DIPR Karnataka (@KarnatakaVarthe) December 30, 2024
GOOD NEWS: ಮಾ.15ರೊಳಗೆ ಕುಸುಮ್- ಸಿ ಮೊದಲ ಹಂತದಡಿ 1,300 ಮೆ.ವ್ಯಾ ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್
BIGG NEWS : 2025 ನೇ ಸಾಲಿನ ರಾಜ್ಯ `ಸಾರ್ವತ್ರಿಕ ರಜೆ’ ದಿನಗಳ ಸಂಪೂರ್ಣ ಪಟ್ಟಿ ಇಲ್ಲಿದೆ | Holiday List 2025