ತುಮಕೂರು: ಜಿಲ್ಲೆಯ ಗುಬ್ಬಿ ಠಾಣೆಯ ಪೊಲೀಸರಿಂದ ಮಕ್ಕಳ ಮಾರಾಟ ಜಾಲ ಪ್ರಕರಣವನ್ನು ಬೇಧಿಸಲಾಗಿತ್ತು. ಈ ಜಾಲದ ಬಗ್ಗೆ ಗಂಭೀರವಾಗಿ ಪರಿಣಿಸಲಾಗಿದ್ದು, ಜಿಲ್ಲೆಯ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಅಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವೆಂಕಟ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಜಿಲ್ಲೆಯಲ್ಲಿ ಪತ್ತೆಯಾದಂತ ಮಕ್ಕಳ ಮಾರಾಟ ಜಾಲವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಬಂಧಿತ ಆರೋಪಿಗಳು ಖಾಸಗಿ ನರ್ಸಿಗ್ ಹೋಂ, ಆಸ್ಪತ್ರೆ, ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿದ್ದರು ಎಂಬುದಾಗಿ ಮಾಹಿತಿ ಹಂಚಿಕೊಂಡರು.
ಜಿಲ್ಲೆಯ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆಯೂ ಕಣ್ಣಿಡಲಾಗಿದೆ. ಆರೋಪಿಗಳ ಜೊತೆಗೆ ನಂಟಿದ್ದಂತ ಸ್ಕ್ಯಾನಿಂಗ್ ಸೆಂಟರ್ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂಬುದಾಗಿ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವೆಂಕಟ್ ಸ್ಪಷ್ಟ ಪಡಿಸಿದರು.
ಜುಲೈ 2ನೇ ವಾರದಲ್ಲಿ ಬೆಂಗಳೂರಿನ ‘ಯಲಹಂಕದ ಅನಿಲ ವಿದ್ಯುತ್ ಘಟಕ’ ಲೋಕಾರ್ಪಣೆ: ಸಚಿವ ಕೆ.ಜೆ ಜಾರ್ಜ್
ವಿದ್ಯಾರ್ಥಿಗಳೇ ಗಮನಿಸಿ: ಜುಲೈ.13, 14ರಂದು ನಿಗದಿ ಪಡಿಸಿದ್ದ ‘PG CET-2024ರ ಪರೀಕ್ಷೆ’ ಮುಂದೂಡಿಕೆ