Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೈಲಾಶ್ ಹಿಲ್ಸ್ ಹತ್ಯಾಕಾಂಡ: “ಕೊಲ್ಲುವ ಉದ್ದೇಶವಿರಲಿಲ್ಲ, ಹಣಕ್ಕಾಗಿ ಹೀಗಾಯ್ತು” – ಆರೋಪಿ ರಾಹುಲ್ ಮೀನಾ ತಪ್ಪೊಪ್ಪಿಗೆ

24/04/2026 3:11 PM

ಬೆಂಗಳೂರಲ್ಲಿ ಸಿಇಟಿ ಪರೀಕ್ಷೆಯಲ್ಲಿ ಮತ್ತೆ ‘ಜನಿವಾರ’ ವಿವಾದ; ಪೋಷಕರ ಆಕ್ರೋಶ, ತನಿಖೆಗೆ ಸಚಿವರ ಆದೇಶ

24/04/2026 2:56 PM

ಶೀಘ್ರವೇ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾದರೂ ಅಚ್ಚರಿಯಿಲ್ಲ – ಶಾಸಕ ಬಿ. ಸುರೇಶ್ ಗೌಡ ಸ್ಫೋಟಕ ಭವಿಷ್ಯ

24/04/2026 2:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಇನ್ಮುಂದೆ ತಂದೆ-ತಾಯಿ, ಹಿರಿಯ ನಾಗರೀಕರನ್ನು ಆರೈಕೆ ಮಾಡದಿದ್ದರೆ ಅವರ ಆಸ್ತಿಯಲ್ಲಿ ಮಕ್ಕಳಿಗೆ ಪಾಲಿಲ್ಲ: ಸಚಿವ ಕೃಷ್ಣ ಬೈರೇಗೌಡ
KARNATAKA

BIG NEWS: ಇನ್ಮುಂದೆ ತಂದೆ-ತಾಯಿ, ಹಿರಿಯ ನಾಗರೀಕರನ್ನು ಆರೈಕೆ ಮಾಡದಿದ್ದರೆ ಅವರ ಆಸ್ತಿಯಲ್ಲಿ ಮಕ್ಕಳಿಗೆ ಪಾಲಿಲ್ಲ: ಸಚಿವ ಕೃಷ್ಣ ಬೈರೇಗೌಡ

By kannadanewsnow0912/03/2025 2:36 PM

ಬೆಂಗಳೂರು: ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ, ತನ್ನ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ಅವರು ನೀಡಿದ ವಿಲ್-ಧಾನಪತ್ರವನ್ನು ರದ್ದು ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರದ “ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007” ನೀಡಿದೆ ಎಂದು ಪರಿಷತ್ನಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

ಬುಧವಾರ ವಿಧಾನ ಪರಿಷತ್ನಲ್ಲಿ ಸದಸ್ಯೆ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, “ಕೇಂದ್ರ ಸರ್ಕಾರದ “ಇತ್ತೀಚಿನ ದಿನಗಳಲ್ಲಿ ಮಕ್ಕಳು ತಮ್ಮ ತಂದೆ-ತಾಯಿಯನ್ನೇ ಆರೈಕೆ ಮಾಡದಂತಹ ಹಲವರು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಒಂದು ವೇಳೆ ಮಕ್ಕಳು ಅಥವಾ ಸಂಬಂಧಿಕರು ತಮ್ಮನ್ನು ಆರೈಕೆ ಮಾಡದಿದ್ದರೆ ಅವರ ಹೆಸರಿಗೆ ಮಾಡಿರುವ ವಿಲ್ ಅಥವಾ ಧಾನಪತ್ರವನ್ನು ರದ್ದು ಮಾಡುವ ಅಧಿಕಾರ ಹಿರಿಯ ನಾಗರೀಕರಿಗೆ ಇದೆ” ಎಂದು ಮಾಹಿತಿ ನೀಡಿದರು.

ಮುಂದುವರೆದು, “ ಕೇಂದ್ರ ಸರ್ಕಾರ 2007 ರಲ್ಲೇ ʼಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆʼ ಯನ್ನು ಜಾರಿಗೆ ತಂದಿದೆ. ಆದರೆ, ಈ ಬಗ್ಗೆ ಹಲವರಿಗೆ ಮಾಹಿತಿಯೇ ಇಲ್ಲ. ಈ ಮಾಹಿತಿಯನ್ನು ಪರಿಣಾಮಕಾರಿಯಾಗಿ ಎಲ್ಲರಿಗೂ ತಲುಪಿಸಬೇಕು ಎಂಬ ಉದ್ದೇಶದಿಂದಲೇ ಪರಿಷತ್ನಲ್ಲಿ ಈ ಕಾಯ್ದೆಯ ಬಗ್ಗೆ ಉಲ್ಲೇಖಿಸುತ್ತಿದ್ದೇನೆ. ಈ ಕಾಯ್ದೆಯ ಪ್ರಕಾರ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರೀಕರನ್ನು ಆರೈಕೆ ಮಾಡಬೇಕು. ಔಷಧಿ ಸೇರಿದಂತೆ ಅವರ ಮಾಸಿಕ ಖರ್ಚಿಗೆ ಹಣ ನೀಡಬೇಕು. ಒಂದು ವೇಳೆ ಹಣ ನೀಡದಿದ್ದರೆ ಅಥವಾ ಆರೈಕೆ ಮಾಡಲು ನಿರ್ಲಕ್ಷಿಸಿದರೆ ಹಿರಿಯ ನಾಗರೀಕರು ಸೆಕ್ಷನ್ 09ರ ಅಡಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ದೂರು ಸಲ್ಲಿಸಬಹುದು” ಎಂದು ತಿಳಿಸಿದರು.

“ಹಿರಿಯ ನಾಗರೀಕರ ದೂರು ಸಾಬೀತಾದರೆ, ತಂದೆ ತಾಯಿಯಿಂದ ಆಸ್ತಿ ಪಡೆದು ಅವರ ಆರೈಕೆ ಮಾಡದಿದ್ದರೆ, ಸೆಕ್ಷನ್ 23ರಂತೆ ಪೋಷಕರು ತಮ್ಮ ಮಕ್ಕಳ ಅಥವಾ ಸಂಬಂಧಿಕರ ಹೆಸರಿನಲ್ಲಿ ಬರೆದಿರುವ ವಿಲ್ ಅಥವಾ ಧಾನಪತ್ರವನ್ನು ರದ್ದುಗೊಳಿಸಿ ಮತ್ತೆ ಪೋಷಕರ ಹೆಸರಿಗೇ ಮರುಸ್ಥಾಪಿಸಲು ಕಾನೂನಿನಲ್ಲಿ ಅವಕಾಶ ಇದೆ. ಈ ಜವಾಬ್ದಾರಿಯನ್ನು ಉಪ ವಿಭಾಗಾಧಿಕಾರಿಗಳಿಗೆ ನೀಡಲಾಗಿದೆ. ಈಗಾಗಲೇ ಉಪ ವಿಭಾಗಾಧಿಕಾರಿಗಳ ಮುಂದೆ ಸಾವಿರಾರು ಪ್ರಕರಣಗಳಿವೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ತಿಂಗಳೂ ಉಪ ವಿಭಾಗಾಧಿಕಾರಿಗಳ ಜೊತೆ ಮಾಸಿಕ ಸಭೆ ನಡೆಸಲಾಗುತ್ತಿದೆ. ಅಲ್ಲದೆ, ಜಿಲ್ಲಾಧಿಕಾರಿಗಳಿಗೆ ಅಪೀಲು ಹೋಗಲೂ ಸಹ ಅರ್ಜಿದಾರರಿಗೆ ಅವಕಾಶ ನೀಡಲಾಗಿದೆ” ಎಂದು ಸದನಕ್ಕೆ ಮಾಹಿತಿ ನೀಡಿದರು.

BREAKING : ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ : ಯೂಟ್ಯೂಬರ್ ಸಮೀರ್ ವಿರುದ್ಧದ ‘FIR’ ಗೆ ಹೈಕೋರ್ಟ್ ತಡೆ

BREAKING : ಬೆಂಗಳೂರಿನ ಜನತೆಗೆ ಬಿಗ್ ಶಾಕ್ : ಆಟೋ ದರ ಏರಿಕೆಗೆ ಗ್ರೀನ್ ಸಿಗ್ನಲ್ | Auto Fare Hike

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಸಿಇಟಿ ಪರೀಕ್ಷೆಯಲ್ಲಿ ಮತ್ತೆ ‘ಜನಿವಾರ’ ವಿವಾದ; ಪೋಷಕರ ಆಕ್ರೋಶ, ತನಿಖೆಗೆ ಸಚಿವರ ಆದೇಶ

24/04/2026 2:56 PM2 Mins Read

ಶೀಘ್ರವೇ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾದರೂ ಅಚ್ಚರಿಯಿಲ್ಲ – ಶಾಸಕ ಬಿ. ಸುರೇಶ್ ಗೌಡ ಸ್ಫೋಟಕ ಭವಿಷ್ಯ

24/04/2026 2:45 PM2 Mins Read

SHOCKING: ರಾಜ್ಯದಲ್ಲಿ ಘೋರ ದುರಂತ: ಜೋಕಾಲಿ ಕುತ್ತಿಗೆಗೆ ಬಿಗಿದು 9 ವರ್ಷದ ಬಾಲಕಿ ಸಾವು

24/04/2026 2:16 PM2 Mins Read
Recent News

ಕೈಲಾಶ್ ಹಿಲ್ಸ್ ಹತ್ಯಾಕಾಂಡ: “ಕೊಲ್ಲುವ ಉದ್ದೇಶವಿರಲಿಲ್ಲ, ಹಣಕ್ಕಾಗಿ ಹೀಗಾಯ್ತು” – ಆರೋಪಿ ರಾಹುಲ್ ಮೀನಾ ತಪ್ಪೊಪ್ಪಿಗೆ

24/04/2026 3:11 PM

ಬೆಂಗಳೂರಲ್ಲಿ ಸಿಇಟಿ ಪರೀಕ್ಷೆಯಲ್ಲಿ ಮತ್ತೆ ‘ಜನಿವಾರ’ ವಿವಾದ; ಪೋಷಕರ ಆಕ್ರೋಶ, ತನಿಖೆಗೆ ಸಚಿವರ ಆದೇಶ

24/04/2026 2:56 PM

ಶೀಘ್ರವೇ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾದರೂ ಅಚ್ಚರಿಯಿಲ್ಲ – ಶಾಸಕ ಬಿ. ಸುರೇಶ್ ಗೌಡ ಸ್ಫೋಟಕ ಭವಿಷ್ಯ

24/04/2026 2:45 PM

Nike Layoffs 2026: ನೈಕ್ ಉದ್ಯೋಗಿಗಳಿಗೆ ಬಿಗ್ ಶಾಕ್: ಜಾಗತಿಕವಾಗಿ 1,400 ಸಿಬ್ಬಂದಿ ವಜಾಕ್ಕೆ ಮುಂದಾಗ ಕಂಪನಿ

24/04/2026 2:22 PM
State News
KARNATAKA

ಬೆಂಗಳೂರಲ್ಲಿ ಸಿಇಟಿ ಪರೀಕ್ಷೆಯಲ್ಲಿ ಮತ್ತೆ ‘ಜನಿವಾರ’ ವಿವಾದ; ಪೋಷಕರ ಆಕ್ರೋಶ, ತನಿಖೆಗೆ ಸಚಿವರ ಆದೇಶ

By kannadanewsnow0924/04/2026 2:56 PM KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ಪ್ರತಿಷ್ಠಿತ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಸಂದರ್ಭದಲ್ಲಿ ಮತ್ತೆ ‘ಜನಿವಾರ’ ಸಂಘರ್ಷ ಮುನ್ನೆಲೆಗೆ ಬಂದಿದೆ. ಮಡಿವಾಳದ ಕೃಪಾನಿಧಿ…

ಶೀಘ್ರವೇ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾದರೂ ಅಚ್ಚರಿಯಿಲ್ಲ – ಶಾಸಕ ಬಿ. ಸುರೇಶ್ ಗೌಡ ಸ್ಫೋಟಕ ಭವಿಷ್ಯ

24/04/2026 2:45 PM

SHOCKING: ರಾಜ್ಯದಲ್ಲಿ ಘೋರ ದುರಂತ: ಜೋಕಾಲಿ ಕುತ್ತಿಗೆಗೆ ಬಿಗಿದು 9 ವರ್ಷದ ಬಾಲಕಿ ಸಾವು

24/04/2026 2:16 PM

BIG NEWS : ತುಮಕೂರಿನಲ್ಲಿ 24ನೇ ರಾಷ್ಟ್ರೀಯ ಅಂಡರ್-20 ಕ್ರೀಡಾಕೂಟ : ಶೌಚಾಲಯದಲ್ಲಿ ಸೂಜಿ, ಸಿರಿಂಜ್ ಪತ್ತೆ!

24/04/2026 2:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.