ಮಡಿಕೇರಿ: ರಾಜ್ಯದಲ್ಲಿ 106 ಅನುದಾನಿತ ಅರೇಬಿಕ್ ಶಾಲೆಗಳು ಇವೆ. 80 ಅನುದಾನ ರಹಿತ ಶಾಲೆಗಳಿವೆ. ರಾಜ್ಯದಲ್ಲಿ ಎಲ್ಲ ಅರೇಬಿಕ್ ಶಾಲೆಗಳ ಮಕ್ಕಳು ಬೇರೆ ಶಾಲೆಗಳ ಮಕ್ಕಳಂತೆ ಉತ್ತಮ ಶಿಕ್ಷಣ ಪಡೆಯಬೇಕು ಎಂದು ಶಿಕ್ಷಣ ಬಿ.ಸಿ ನಾಗೇಶ್ ಹೇಳಿದ್ದಾರೆ.
BIGG NEWS: ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ; ಇನ್ನೊಂದು ಡೆತ್ನೋಟ್ ಇದೆ; SP ಸ್ಫೋಟಕ ಮಾಹಿತಿ
ನಗರದಲ್ಲಿ ಮಾತನಾಡಿದ ಅವರು, ಶಿಕ್ಷಣ ಇಲಾಖೆಯ ಪಠ್ಯಕ್ರಮದ ಅನುಸಾರ ಬೋಧನೆ ನಡೆಯುತ್ತಿಲ್ಲ ಎಂಬ ಆರೋಪಗಳಿವೆ. ಹೀಗಾಗಿ, ಈ ಕುರಿತು ಪರಿಶೀಲಿಸಲಾಗುತ್ತಿದೆ ಎಂದರು. ಬೇರೆ ಅನುದಾನಿತ ಶಾಲೆಗಳ ರೀತಿಯಲ್ಲಿ ಅರೇಬಿಕ್ ಶಾಲೆಗಳು ಶಿಕ್ಷಣ ನೀಡಬೇಕು. ಆದರೆ, ಬಹಳಷ್ಟು ಶಾಲೆಗಳಲ್ಲಿ ಭಾಷೆ ಮತ್ತು ವಿಜ್ಞಾನದ ಕಲಿಕೆ ಆಗುತ್ತಿಲ್ಲ ಎಂದು ಬೇಸರವ್ಯಕ್ತಪಡಿಸಿದರು.
ರಾಜ್ಯದಲ್ಲಿ ಇಂತಹ ಶಾಲೆಗಳಿಗೆ ಪ್ರತಿವರ್ಷ ಸುಮಾರು 27 ಸಾವಿರ ಸಂಖ್ಯೆ ಮಕ್ಕಳು ಸೇರುತ್ತಾರೆ. ಆದರೆ, ಎಸ್ಎಸ್ಎಲ್ಸಿಯಲ್ಲಿ ಕೇವಲ 2 ಸಾವಿರ ವಿದ್ಯಾರ್ಥಿಗಳು ಮಾತ್ರವೇ ಇರುತ್ತಾರೆ.