Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್
KARNATAKA

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

By ವಸಂತ ಬಿ ಈಶ್ವರಗೆರೆ

ದಾವಣಗೆರೆ : ಹಿಂದುಳಿದ ವರ್ಗಗಳ ಮಕ್ಕಳು ಮತ್ತು ಕನಕನ ಮಕ್ಕಳು ಕೀಳರಿಮೆಯಿಂದ ಹೊರಗೆ ಬರಬೇಕಿದೆ. ಕೀಳರಿಮೆ ಮೆಟ್ಟಿ ಮೇಲೇಳುವುದಕ್ಕೆ ದಾಸಶ್ರೇಷ್ಠ ಕನಕದಾಸರ ಬಂಡಾಯದ ಮಾದರಿ ನಮ್ಮ‌ ಅಂಗೈಯಲ್ಲಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.

ಕನಕ ನೌಕರರ ಬಳಗ ಮತ್ತು ಜಿಲ್ಲಾ ಕುರುಬರ ವಿದ್ಯಾವರ್ದಕ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.

“ಇತಿಹಾಸ ಅರಿಯದವರು ಭವಿಷ್ಯ ರೂಪಿಸಲಾರರು” ಎನ್ನುವ ಮಾತಿದೆ. ಇವತ್ತು ನಮ್ಮ ಸಮುದಾಯದ ನಾನು ಮತ್ತು ಈ ಮಕ್ಕಳು ಪ್ರತಿಭಾವಂತರಾಗಿ ಇಲ್ಲಿ ಗೌರವಿಸಲ್ಪಡುತ್ತಿದ್ದೇವೆ ಎಂದರೆ ಇದಕ್ಕೆ ನಮ್ಮ ಹಿರಿಯರು ಮತ್ತು ಹಿಂದಿನವರು ನಡೆಸಿದ ಹೋರಾಟಗಳು ಕಾರಣ.

ಅಕ್ಷರ ಕಲಿತರೆ ಕಿವಿಗೆ ಕಾದ ಸೀಸ ಸುರಿಯುವ ಶಿಕ್ಷೆ ವಿಧಿಸುತ್ತಿದ್ದ ಕಾಲದಿಂದ ನಮ್ಮದೇ ಆದ ವಿದ್ಯಾವರ್ದಕ ಸಂಘ ಕಟ್ಟಿಕೊಂಡು SSLC ಯಿಂದ MBBS ವರೆಗೂ ಸಾವಿರಾರು ಪ್ರತಿಭಾವಂತರನ್ನು ಪುರಸ್ಕರಿಸುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಈ ಸಾಧನೆಯ ಹಿಂದೆ ಇರುವ ಪ್ರತೀ ಹೆಜ್ಜೆ ಗುರುತುಗಳನ್ನೂ ನಾವು ಅರಿತುಕೊಳ್ಳಬೇಕಿದೆ ಎಂದರು.

ದಾಸಶ್ರೇಷ್ಠ ಕನಕದಾಸರು ಅಂದರೆ ನಮಗೆಲ್ಲಾ ಭಕ್ತಿ ಬರುತ್ತದೆ. ಆದರೆ ಕನಕದಾಸರ ಬದುಕಿನ ಸಂದೇಶ ಕೇವಲ ಅವರನ್ನು ಭಕ್ತಿಯಿಂದ ಪೂಜಿಸುವುದಾಗಿರಲಿಲ್ಲ.

ಎಳೆಯ ವಯಸ್ಸಿನಿಂದಲೂ ಕನಕರ ಬಗ್ಗೆ ಮಾತನಾಡುವಾಗ ಕನಕರ ಹೋರಾಟವನ್ನು ತಿಳಿಯುವುದರ ಬದಲಾಗಿ ಕನಕನ ಕಿಂಡಿಯ ಬಗ್ಗೆ ತಿಳಿಯುವುದರಲ್ಲಿ ನಮಗೆ ಹೆಚ್ಚು ಉತ್ಸಾಹ ಮೂಡಿಸಿರುವುದರ ಹಿಂದೆಯೂ ಒಂದು ಸಾಂಸ್ಕೃತಿಕ ರಾಜಕಾರಣ ಇದೆಯಲ್ಲವೇ ಎಂದು ಪ್ರಶ್ನಿಸಿದರು.

ದೇವರು ಸಂಸ್ಕೃತದಲ್ಲಿ ಮಾಡುವ ಭಕ್ತಿ, ಪ್ರಾರ್ಥನೆಯನ್ನು ಮಾತ್ರ ಸ್ವೀಕರಿಸುತ್ತಾನೆ ಎನ್ನುವ “ಅಹಂ” ಜಾರಿಯಲ್ಲಿದ್ದ ಸಂದರ್ಭದಲ್ಲಿ ಕನಕದಾಸರು ತಾಯಿ ಭಾಷೆಯಲ್ಲಿ ವಚನಗಳನ್ನು, ಕೀರ್ತನೆಗಳನ್ನು ರಚಿಸಿ ಕೃಷ್ಣನನ್ನು ತನ್ನ ಕಡೆಗೆ ತಿರುಗಿಸಿಕೊಂಡರು ಎನ್ನುವುದು ಕೇವಲ ಕತೆಯಲ್ಲ. ಕೀಳರಿಮೆ ಮತ್ತು ಕುಲದ ಅವಮಾನವನ್ನು ಮೆಟ್ಟಿನಿಂತ ಹೋರಾಟ ಮತ್ತು ಬಂಡಾಯ ಎನ್ನುವುದನ್ನು ನಾವು ಮರೆಯಬಾರದು.

ಕನಕದಾಸರು ಸಮಾಜದ ನೋವನ್ನು ಹಾಡಾಗಿ ಹಾಡಿದರು ಎಂದು ನಾನು ಹಿಂದೊಮ್ಮೆ ಹೇಳಿದ್ದೆ. “ಕುಲ ಕುಲವೆಂದು ಬಡಿದಾಡದಿರಿ…” ಎಂದು ಕನಕರು ಹಾಡುವ ಮೊದಲು ಕುಲದ ಅವಮಾನವನ್ನು ಅನುಭವಿಸಿದ್ದರು. ಈ ಅವಮಾನವನ್ನು ಅಳಿಸಲು ಬದುಕಿನುದ್ದಕ್ಕೂ ಶ್ರಮಿಸಿದ ಬಂಡಾಯಗಾರರು.

ಆದರೆ, ಕನಕರ ಹೋರಾಟದ ಪರಂಪರೆಯನ್ನೇ ನಾಶಮಾಡುವ ಹುನ್ನಾರದ ಭಾಗವಾಗಿ ಅವರನ್ನು ಕೇವಲ ಭಕ್ತಿಗೆ ಸೀಮಿತಗೊಳಿಸುತ್ತಿದ್ದಾರೆ. ಇದು ನಮ್ಮ ಇವತ್ತಿನ ಮತ್ತು ಮುಂದಿನ ಪೀಳಿಗೆಯಲ್ಲಿ ಹೋರಾಟವನ್ನು ಮರೆಸುವ ತಂತ್ರವೇ ಆಗಿದೆ. ಹೀಗಾಗಿ ಭಕ್ತಿಯ ಜೊತೆಗೆ ಕನಕರ ಬಂಡಾಯವನ್ನು ನಾವು ಅರಿಯೋಣ.

ನಾವು ಪೋಷಕರು ಮಕ್ಕಳಿಗೆ ಶಿಕ್ಷಣದ ಜೊತೆಗೆ ಬದುಕಿನ ಮೌಲ್ಯಗಳನ್ನು ಕೊಡಬೇಕು. ಆಗ ಸಮಾಜ ಮೌಲ್ಯಯುತವಾಗುತ್ತದೆ ಎಂದರು.

ಇವತ್ತಿನ‌ ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಿಂದುಳಿದ ಸಮುದಾಯಗಳ ಮಕ್ಕಳಲ್ಲಿನ ಕೀಳರಿಮೆ ಅಳಿಸಿ ಆತ್ಮವಿಶ್ವಾಸ ಎನ್ನುವ “ರಕ್ತದಾನ” ಮಾಡಿದಂತೆ ಎಂದು ಭಾವಿಸುತ್ತೇನೆ. ಆತ್ಮವಿಶ್ವಾಸದ ರಕ್ತದಾನದಿಂದ ಇಡೀ ನಮ್ಮ ಸಮಾಜ ಬಲಿಷ್ಠಗೊಳ್ಳುತ್ತದೆ ಎನ್ನುವ ಭರವಸೆ ವ್ಯಕ್ತಪಡಿಸುತ್ತಾ ನನ್ನ ಮಾತುಗಳನ್ನು ಮುಗಿದುತ್ತೇನೆ.

ಇವತ್ತು ಎಲ್ಲಾ ಮಕ್ಕಳೂ ವಿದ್ಯಾವಂತರೇ. ಆದರೆ ಹೃದಯವಂತರಾಗುವ ಅಗತ್ಯವಿದೆ. ವೃದ್ಧಾಶ್ರಮಗಳಿಲ್ಲದ ಮಾನವೀಯ ಮತ್ತು ಜವಾಬ್ದಾರಿಯುತ ಸಮಾಜ ನಿರ್ಮಾಣ ನಮ್ಮ ಆದ್ಯತೆಯಾಗಲಿ ಎಂದು ಕರೆ ನೀಡಿದರು.

ಕಾಗಿನೆಲೆ ಮಹಾಸಂಸ್ಥಾನ, ಕನಕ ಗುರುಪೀಠದ ಪೂಜ್ಯರಾದ ಜಗದ್ಗುರು ಶ್ರೀ ಡಾ.ನಿರಂಜನಾನಂದಪುರಿ ಮಹಾ ಗುರುಗಳು ದಿವ್ಯ ಸಾನಿದ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ, ಸಂಸದರಾದ ಪ್ರಭಾ ಮಲ್ಲಿಕಾರ್ಜುನ್, ಕೊಪ್ಪಳ ವಿವಿ ಕುಲಪತಿಗಳಾದ ಡಾ.ಬಿ.ಕೆ.ರವಿ, ಬಾಲ ಭವನ ಅಧ್ಯಕ್ಷರಾದ ಬಿ.ಆರ್. ನಾಯ್ಡು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Watch Video: ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿದ ‘IAS ಅಧಿಕಾರಿ’: ವೀಡಿಯೋ ವೈರಲ್

Share. Facebook Twitter LinkedIn WhatsApp Email

Related Posts

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

1 Min Read

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

1 Min Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

3 Mins Read
Recent News

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

​ತಾಂತ್ರಿಕ ದೋಷ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅರ್ಧದಾರಿಯಲ್ಲೇ ವಾಪಸ್

State News
KARNATAKA

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಕ್ರಿಕೆಟ್ ಹಾಗೂ ಐಪಿಎಲ್ ಅಭಿಮಾನಿಗಳ ಕ್ರೇಜ್‌ಗೆ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಗೋಪಾಲಕೃಷ್ಣ ಬೇಳೂರು…

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.