ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಿ ಆದೇಶನ್ನು ಹೊರಡಿಸಲಾಗಿದೆ ಆರ್ಹ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ.
ದಿನಾಂಕ: 28-05-2024 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ 2024ನೇ ವರ್ಷದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಗಳಲ್ಲಿ ಶೇ. 90% ಮತ್ತು 90% ಕ್ಕಿಂತಲೂ ಹೆಚ್ಚು ಅಂಕ ಗಳಿಸಿರುವ ರಾಜ್ಯ ಸರ್ಕಾರದ ಅಧಿಕಾರಿ-ನೌಕರರ ಮಕ್ಕಳ “ಪ್ರತಿಭಾ ಪುರಸ್ಕಾರ” Online ನಲ್ಲಿ ದಿನಾಂಕ: ರವರೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. 30-05-2024 ಕೆಲವು ಅಧಿಕಾರಿ-ನೌಕರರ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲು ಕೋರಿದ್ದರ ಮೇರೆಗೆ ಅಂತಿಮವಾಗಿ ದಿನಾಂಕ: 02-06-2024ರವರೆಗೆ ದಿನಾಂಕವನ್ನು ವಿಸ್ತರಿಸಲಾಗಿದೆ. ಮತ್ತೊಮ್ಮೆ ದಿನಾಂಕವನ್ನು ವಿಸ್ತರಣೆ ಮಾಡಲಾಗುವುದಿಲ್ಲ ಅಂಥ ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.