ಬೆಂಗಳೂರು: ಪ್ರಸ್ತುತ, ಮಾಂಡೋಸ್ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಪ್ರಮಾಣದಲ್ಲಿ ಮಳೆ, ಶೀತ ಗಾಳ ಹಾಗೂ ಅತಿ ಕಡಿಮೆ ತಾಪಮಾನವು ವರದಿಯಾಗಿದ್ದು, ಈ ಪರಿಸ್ಥಿತಿಯು ಇನ್ನೂ ಅನೇಕ ದಿನಗಳು ಮುಂದುವರೆಯುವ ಸಾಧ್ಯತೆಯಿದ್ದು, ಮುಂದಿನ ವಾರದಲ್ಲಿ ಇನ್ನೊಂದು ಚಂಡಮಾರುತವು ಬಂಗಾಳಕೊಲ್ಲಗೆ ಅಪ್ಪಳಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯು ನೀಡಿದೆ. ಹಿನ್ನೆಲೆಯಲ್ಲಿ ಹಾಗೂ ಮುಂಬರುವ ಚಳಗಾಲದ ದಿನಗಳಲ್ಲಿ ಸಾರ್ವಜನಿಕರು, ಮಕ್ಕಳು ( ನವಜಾತ ಸೇರಿದಂತೆ),ಗರ್ಭಿಣಿಯರು, ವೃದ್ಧರು, ವಿಶೇಷವಾಗಿ ಇತರೆ ಆರೋಗ್ಯ ಸಮಸ್ಯೆಗಳಿಂದ ಈ ಕೆಳಗಿನ ಸಲಹೆಗಳನ್ನು ಪಾಅಸುವುದರಿಂದ ಉತ್ತಮ ಆರೋಗ್ಯವನ್ನು ಕಾಪಾಡಬಹುದಾಗಿದೆ.
ಮಾಡಬೇಕಾದ್ದು ಹಾಗೂ ಮಾಡಬಾರದಾದ ಕ್ರಮಗಳ ಪಟ್ಟಿ
ಮಾಡಬೇಕಾದ್ದು (Do’s)
- ಯಾವಾಗಲೂ ಬೆಚ್ಚಗಿನ ನೀರು / ಸೂಪ್ಗಳನ್ನು ಕುಡಿಯುವುದು.
- ಸುಲಭವಾಗಿ ಜೀರ್ಣವಾಗುವ ಹಾಗೂ ಆಗತಾನೆ ತಯಾರಿಸಿದ ಆಹಾರ ಪದಾರ್ಥಗಳನ್ನು ಸೇವಿಸುವುದು.
- ಯಾವಾಗಲೂ ಸೈಟರ್ ಒಳಗಿರುವಾಗಲೂ ಬೆಚ್ಚಗಿರುವುದು ಉತ್ತಮ.
- ಸ್ನಾನಕ್ಕೆ ಬಿಸಿ ನೀರು | ಬೆಚ್ಚಗಿನ ನೀರನ್ನು ಉಪಯೋಗಿಸುವುದು.
- ಅನಗತ್ಯವಾಗಿ ಹೊರ ಸಂಚಾರವನ್ನು ತಪ್ಪಿಸಿ.
- ಕಿವಿಗಳನ್ನು ಹತ್ತಿಯಿಂದ ಮುಚ್ಚಿಕೊಳ್ಳಿ ಅಥವಾ ಸ್ಕಾರ್ಫ್ ಕಟ್ಟಕೊಳ್ಳಿ ಹಾಗೂ ಹೋಗಲೇಬೇಕಾದಲ್ಲಿ ಮಾಸ್ಕ್ ಧರಿಸಬೇಕು.
- ನೆಗಡಿ, ಕೆಮ್ಮು ಹಾಗೂ ಜ್ವರದ ಲಕ್ಷಣಗಳರುವರಿಂದ ದೂರವಿರಬೇಕು.
- ಮೊಣಕೈ ಒಳಗೆ ಸೀನುವುದು / ಕೆಮ್ಮುವುದು. ಅಥವಾ ಸೀನುವಾಗ / ಕೆಮ್ಮುವಾಗ ಟಿಶ್ಯ ಅಥವಾ ಕರವಸ್ತ್ರವನ್ನು ಬಳಸುವುದು.
•ಕೈಗಳನ್ನು ಆಗಾಗ್ಗೆ ನೀರು ಹಾಗೂ ಸೋಪಿನಿಂದ ತೊಳೆಯುವುದು. - ಜ್ವರ / ಘನ ಲಕ್ಷಣಗಳು ಅಥವಾ ಇತರೆ ಯಾವುದಾದರೂ ಖಾಯಿಲೆಯ ಲಕ್ಷಣಗಳದ್ದಲ್ಲಿ ತಕ್ಷಣವೇ ವೈದ್ಯರ ಸಲಹೆಯನ್ನು ಪಡೆಯುವುದು. ಸ್ವಯಂವೈದ್ಯ ಪದ್ಧತಿಗಳನ್ನು ಅನುಸರಿಸಬಾರದು.
ಮಾಡಬಾರದ್ದು (Don’ts )
- ತಣ್ಣಗಿನ ಪಾನೀಯಗಳು, ಐಸ್ ಕ್ರೀಂಗಳನ್ನು ಸೇವಿಸಬಾರದು.
- ರೆಫ್ರಿಜರೇಟರ್ನ ಅಥವಾ ತಣ್ಣಗಿನ ನೀರನ್ನು ಕುಡಿಯಬಾರದು.
- ಮಳೆಯಲ್ಲಿ ನೆನೆಯುವುದನ್ನು ಹಾಗೂ ತಣ್ಣನೆಯ ಶೀತ ಗಾಳಿಗೆ ಮೈ ಒಡ್ಡುವುದನ್ನು ತಪ್ಪಿಸಬೇಕು.
- ಹೊರಾಂಗಣ ಪ್ರವಾಸಗಳನ್ನು ಆದಷ್ಟು ನಿರ್ಭಂಧಿಸಿ ( ವಿಶೇಷವಾಗಿ ಗಿರಿಧಾಮಗಳಿಗೆ ವಾರಾಂತ್ಯದ ಪ್ರವಾಸ ಹೋಗುವುದು , ಇತ್ಯಾದಿ).
- ಮಸಾಲಾಯುಕ್ತ ಪದಾರ್ಥಗಳು / ಜಂಕ್ ಫುಡ್ಗಳನ್ನು ವರ್ಜಿಸಬೇಕು.