ಶಿವಮೊಗ್ಗ: ಸಾಗರ ನಗರದಲ್ಲಿ ಜನ್ನತ್ ಗಲ್ಲಿ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಬಾಲಕರಿಬ್ಬರು ಉಗಿದಂತ ವೀಡಿಯೋ ವೈರಲ್ ಆಗಿದೆ. ಈ ವೀಡಿಯೋ ವೈರಲ್ ಆದ ಬೆನ್ನಲ್ಲೇ ಚಿಕ್ಕ ಮಕ್ಕಳು ತಿಳಿಯದೇ ಹೀಗೆ ಮಾಡಿದ್ದಾರೆ. ಅವರ ಪರವಾಗಿ ನಾವು ಕ್ಷಮೆಯನ್ನು ಯಾಚಿಸುತ್ತೇವೆ ಅಂತ ಪೋಷಕರು ಕ್ಷಮೆಯಾಚಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಇಂದು ಜನ್ನತ್ ಗಲ್ಲಿಯ ಗಣಪತಿ ಮೂರ್ತಿಯನ್ನು ರಾಜಬೀದಿಯಲ್ಲಿ ಉತ್ಸವದ ಮೂಲದ ವಿಸರ್ಜನೆಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗಿತ್ತು. ಗಣಪತಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯುತ್ತಿದ್ದಂತ ಸಂದರ್ಭದಲ್ಲಿ ಅನ್ಯ ಕೋಮಿನ ಬಾಲಕರಿಬ್ಬರು ಮನೆಯ ಮೇಲಿನಿಂದ ಉಗಿಯುತ್ತಿರುವಂತ ವೀಡಿಯೋ ವೈರಲ್ ಆಗಿದೆ.
ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಹಿಂದೂ ಪರ ಸಂಘಟನೆಗಳಿಂದ ಸ್ಥಳದಲ್ಲಿಯೇ ಪ್ರತಿಭಟನೆಯನ್ನು ನಡೆಸಲಾಯಿತು. ಗಣೇಶ ಮೂರ್ತಿಗೆ ಅಪಮಾನ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೂ ಒತ್ತಾಯಿಸಲಾಯಿತು.
ಪರಿಸ್ಥಿತಿಯ ಗಂಭೀರತೆಯನ್ನು ಅರಿತಂತ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರು, ವೈರಲ್ ಆಗಿರುವಂತ ವೀಡಿಯೋದಲ್ಲಿ ಇಬ್ಬರು ಬಾಲಕರಲ್ಲಿ ಓರ್ವ ಮೆರವಣಿಗೆಯ ಮೇಲೆ ಉಗಿದಿರುವುದು ಕಂಡು ಬಂದಿದೆ. ಆ ಇಬ್ಬರು ಮಕ್ಕಳನ್ನು ಸೆಕ್ಯೂರ್ ಮಾಡಲಾಗಿದೆ. ಈ ಘಟನೆಯ ಬಗ್ಗೆ ಮಕ್ಕಳ ಪೋಷಕರು ಕ್ಷಮೆಯಾಚಿಸಿದ್ದಾರೆ ಎಂದರು.
ಈಗಾಗಲೇ ಹಿಂದೂಪರ ಸಂಘಟನೆಯ ಮುಖಂಡರಿಗೂ ವಿಷಯವನ್ನು ಮನವರಿಕೆ ಮಾಡಿಕೊಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
SHOCKING : ವಿವಾಹಿತನಿಂದ ನಿರಂತರ ಅತ್ಯಾಚಾರ : ಮಗುವಿಗೆ ಜನ್ಮ ನೀಡಿದ 11 ವರ್ಷದ ಬಾಲಕಿ.!
ಸೆ.22ರಿಂದ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭ: ಈ ಮಾಹಿತಿ ನೀಡೋದು ಕಡ್ಡಾಯ