Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಶಾಲೆಗಳಲ್ಲಿ 18 ವರ್ಷದೊಳಗಿನ ಮಕ್ಕಳು `ಮೊಬೈಲ್’ ಬಳಕೆ ಮಾಡುವಂತಿಲ್ಲ.!
KARNATAKA

ರಾಜ್ಯದ ಶಾಲೆಗಳಲ್ಲಿ 18 ವರ್ಷದೊಳಗಿನ ಮಕ್ಕಳು `ಮೊಬೈಲ್’ ಬಳಕೆ ಮಾಡುವಂತಿಲ್ಲ.!

By kannadanewsnow57

ಶಾಲೆಯಲ್ಲಿ 18 ವರ್ಷದೊಳಗಿನ ಮಕ್ಕಳು ಮೊಬೈಲ್ ಬಳಕೆ ಹಾಗೂ ಸಾಮಾಜಿಕ ಜಾಲತಾಣಗಳ ಬಳಕೆ ಮಾಡುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೋಕ್ಸೊ ಹಾಗೂ ಬಾಲಗರ್ಭಿಣಿಯರು ಹಾಗೂ ಮಕ್ಕಳ ಸುರಕ್ಷತೆ ಕುರಿತು ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಸಮಾಜದಲ್ಲಿ ಹೆಣ್ಣು ಮಕ್ಕಳನ್ನು ಎರಡನೆ ದರ್ಜೆಯ ಪ್ರಜೆಯಾಗಿ ನೋಡುತ್ತಾರೆ. ಹೆಣ್ಣು ಮಕ್ಕಳ ಸುರಕ್ಷತೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಈ ಹಿನ್ನೆಯಲ್ಲಿ ಪ್ರತಿ ಮಂಗಳವಾರ ಬೆ.11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ಹಾಗೂ ಸಂಜೆ.07 ಗಂಟೆಗೆ “ಡಿಸ್ಕಸ್ ವಿತ್ ಡಿಸಿ” ಎಂಬ ಕಾರ್ಯಕ್ರಮದೊಂದಿಗೆ ವಿಡಿಯೋ ಸಂವಾದದ ಮೂಲಕ ಎಲ್ಲಾ ವಸತಿ ಶಾಲೆ ಮತ್ತು ವಸತಿ ನಿಲಯಗಳ ಮಕ್ಕಳಲ್ಲಿ ಅರಿವು ಮೂಡಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹೆಣ್ಣು ಮಕ್ಕಳ ಸುರಕ್ಷತೆಯನ್ನು ಗಂಭೀರವಾಗಿ ಪರಿಗಣಿಸಿ, ಉದಾಸೀನ ಮಾಡದೆ, ತೀವ್ರತೆಯನ್ನು ಅರಿತು ಸುರಕ್ಷತೆಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಒಂದು ತಂಡವಾಗಿ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.

ಹೆಣ್ಣು ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳು ಬೆಳಕಿಗೆ ಬರುವುದಿಲ್ಲ, ಎಂತಹ ಸಂದರ್ಭದಲ್ಲೂ ಕೂಡಾ ದೃತಿಗೆಡದೆ ಧೈರ್ಯವಾಗಿ ನಡೆದ ಘಟನೆಯ ಬಗ್ಗೆ ಮುಕ್ತವಾಗಿ ಮಕ್ಕಳು ಹೇಳುವಂತೆ ಪ್ರಜ್ಞಾವಂತರನ್ನಾಗಿ ಮಾಡಬೇಕು. ಜೊತೆಗೆ ಸ್ವಯಂ ರಕ್ಷಣೆ ಮಾಡಿಕೊಳ್ಳಲು ಅವರಿಗೆ ತರಬೇತಿ ನೀಡುವುದರ ಮೂಲಕ ಸಜ್ಜುಗೊಳಿಸಬೇಕು ಎಂದರು.

ಹೆಣ್ಣು ಮಕ್ಕಳು ಯಾವುದೇ ತೊಂದರೆಗೆ ಸಿಲುಕಿದಾಗ ಅಂಜದೆ, ಸಂಕೋಚ ಪಡದೆ 1098 ಗೆ ಕರೆ ಮಾಡುವಂತೆ ಅವರಿಗೆ ಧೈರ್ಯ ತುಂಬಬೇಕು ಎಂದರಲ್ಲದೆ, ಶಾಲೆಯಲ್ಲಿ 18 ವರ್ಷದೊಳಗಿನ ಮಕ್ಕಳು ಮೊಬೈಲ್ ಬಳಕೆ ಹಾಗೂ ಸಾಮಾಜಿಕ ಜಾಲತಾಣಗಳ ಬಳಕೆ ಮಾಡುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ನಿಗಾ ವಹಿಸಬೇಕು ಎಂದು ತಿಳಿಸಿದರು.

ಪ್ರೀತಿ-ಪ್ರೇಮಕ್ಕೆ ಸಿಲುಕಿ ಹೆಣ್ಣು ಮಕ್ಕಳು ತಮ್ಮ ಜೀವನವನ್ನೇ ಹಾಳುಮಾಡಿಕೊಳ್ಳುತ್ತಾರೆ. ಮೊದಲು ಓದು ಮುಖ್ಯ, ಸರಿದಾರಿಯಲ್ಲಿ ನಡೆದು, ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಮಕ್ಕಳಿಗೆ ಅರಿವು ಮೂಡಿಸಬೇಕು ಎಂದರಲ್ಲದೆ, ಬಾಲಗರ್ಭಿಣಿಯರಾಗುವುದರಿಂದ ದೈಹಿಕ ಹಾಗೂ ಮಾನಸಿಕವಾಗಿ ಉಂಟಾಗುವ ದುಷ್ಪರಿಣಾಮದ ಬಗ್ಗೆ ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿಗಳು ಮಕ್ಕಳಿಗೆ ತಿಳುವಳಿಕೆ ಮೂಡಿಸಲು ಕ್ರಮವಹಿಸುವಂತೆ ತಿಳಿಸಿದರು.

ಪೋಕ್ಸೊ ಪ್ರಕರಣಗಳಲ್ಲಿ ಶಿಕ್ಷೆ ಆಗುವುದರ ಬಗ್ಗೆ ಮಕ್ಕಳಿಗೆ ಕಿರುಚಿತ್ರದ ಮೂಲಕ ತಿಳುವಳಿಕೆ ನೀಡಬೇಕು ಎಂದರಲ್ಲದೆ, ಆಕಾಶವಾಣಿ ಹಾಗೂ ಸ್ಥಳೀಯ ಕೇಬಲ್ ವಾಹಿನಿಗಳ ಮೂಲಕವೂ ಕೂಡಾ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬಾಲ್ಯ ವಿವಾಹ, ಲೈಗಿಂಕ ದೌರ್ಜನ್ಯದಂತಹ ವಿಷಯಗಳ ಕುರಿತು ಕಡ್ಡಾಯವಾಗಿ ಎಲ್ಲಾ ಶಾಲೆಗಳಲ್ಲಿ ಪ್ರತಿಯೊಂದು ಮಗುವಿನಿಂದ ಸಮಸ್ಯೆ ಮತ್ತು ಪರಿಹಾರದ ಬಗ್ಗೆ ಪ್ರಬಂಧ ಬರೆಸಲು ಕ್ರಮವಹಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮಕ್ಕಳ ಗ್ರಾಮ ಸಭೆಗಳಲ್ಲೂ ಕೂಡಾ ಬಾಲ್ಯ ವಿವಾಹ, ಬಾಲ ಕಾರ್ಮಿಕತೆ, ಬಾಲ ಗರ್ಭಿಣಿ, ಪೋಕ್ಸೊ, ಹೆಣ್ಣು ಮಕ್ಕಳ ಸುರಕ್ಷತೆ ಕುರಿತು ಅರಿವು ಮೂಡಿಸಬೇಕು ಎಂದರಲ್ಲದೆ,

ತಾAಡ, ಗೊಲ್ಲರಹಟ್ಟಿ, ಕಾಫಿ ಎಸ್ಟೇಟ್, ವಲಸೆ ಕಾರ್ಮಿಕರಲ್ಲಿ ಅರಿವು ಮೂಡಿಸಲು ಕಾರ್ಯಕ್ರಮ ಆಯೋಜಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ದಾಖಲಾಗಿರುವ ಹಾಗೂ ಜನವರಿಯಿಂದ ಇದುವರೆಗೆ ದಾಖಲಾಗಿರುವ ಪೋಕ್ಸೊ ಪ್ರಕರಣಗಳ ಬಗ್ಗೆ ತಾಲ್ಲೂಕುವಾರು ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಪೋಕ್ಸೊ ಪ್ರಕರಣಗಳಲ್ಲಿ ಕೃತ್ಯ ಯಾರಿಂದ, ಎಲ್ಲಿ, ಯಾರ ಮೇಲೆ ನಡೆದಿದೆ ಎಂಬುದರ ಬಗ್ಗೆ ಹಾಗೂ ಆ ಮಕ್ಕಳ ಹಿನ್ನೆಲೆಯ ಬಗ್ಗೆ ಕೂಡಾ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಅನಿಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಧರಣಿ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿಲೀಪ್ ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Children under the age of 18 are not allowed to use mobile phones in state schools!
Share. Facebook Twitter LinkedIn WhatsApp Email

Related Posts

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

2 Mins Read

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

2 Mins Read

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

2 Mins Read
Recent News

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

​ಏರ್ ಇಂಡಿಯಾ ವಿಮಾನ ದುರಂತ: ಸಂತ್ರಸ್ತ ಕುಟುಂಬಗಳ ಮೇಲೆ ಅಂತಿಮ ಪರಿಹಾರಕ್ಕಾಗಿ ಯಾವುದೇ ಒತ್ತಡವಿಲ್ಲ; ಏರ್ ಇಂಡಿಯಾ ಸ್ಪಷ್ಟನೆ

State News
KARNATAKA

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಪವರ್‌ ಕಂಪನಿ ಆಫ್‌ ಕರ್ನಾಟಕ ಲಿಮಿಟೆಡ್ ಮೂಲಕ ರಾಜ್ಯವು ಕಳೆದ ಎರಡೂವರೆ ತಿಂಗಳಲ್ಲಿ ಪ್ರತಿ ಯೂನಿಟ್‌ಗೆ 9.08 ರೂಪಾಯಿಯಂತೆ…

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.