BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರಂತದಲ್ಲಿ ಸಾವನ್ನಪ್ಪಿದಂತ ಮೃತರ ಕುಟುಂಬಕ್ಕೆ ಘೋಷಿಸಿದ್ದಂತ ಪರಿಹಾರದ ಮೊತ್ತವನ್ನು ತಲಾ 25 ಲಕ್ಷಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.  ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ  ಆದೇಶಿಸಿದ್ದಾರೆ. ಈ ಮೊದಲು … Continue reading BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ