ಬೆಂಗಳೂರು: ಐಪಿಎಲ್ ಟ್ರೋಫಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ ನೈತಿಕ ಹೊಣೆ ಹೊತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ ಸಿಎ) ಕಾರ್ಯದರ್ಶಿ ಮತ್ತು ಖಜಾಂಚಿ ಸ್ಥಾನಕ್ಕೆ ಎ.ಶಂಕರ್ ಮತ್ತು ಇ.ಎಸ್.ಜಯರಾಂ ರಾಜೀನಾಮೆ ನೀಡಿದ್ದಾರೆ.
ಶಂಕರ್ ಮತ್ತು ಜಯರಾಮ್ ಅವರು ಗುರುವಾರ ರಾತ್ರಿ ಕೆಎಸ್ಸಿಎ ಅಧ್ಯಕ್ಷರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿರುವುದಾಗಿ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
“… ಕಳೆದ ಎರಡು ದಿನಗಳಲ್ಲಿ ನಡೆದ ಅನಿರೀಕ್ಷಿತ ಮತ್ತು ದುರದೃಷ್ಟಕರ ಘಟನೆಗಳಿಂದಾಗಿ ಮತ್ತು ನಮ್ಮ ಪಾತ್ರವು ತುಂಬಾ ಸೀಮಿತವಾಗಿದ್ದರೂ, ನಾವು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಮತ್ತು ಖಜಾಂಚಿಯಾಗಿ ನಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇವೆ ಎಂದು ಹೇಳಲು ಬಯಸುತ್ತೇವೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಗೇಟ್ ಮ್ಯಾನೇಜ್ಮೆಂಟ್ ಮತ್ತು ಕ್ರೌಡ್ ಮ್ಯಾನೇಜ್ಮೆಂಟ್ ಅಸೋಸಿಯೇಷನ್ನ ಜವಾಬ್ದಾರಿಯಲ್ಲ ಮತ್ತು ಆರ್ಸಿಬಿ ಐಪಿಎಲ್ ಆಚರಣೆಯನ್ನು ವಿಧಾನಸೌಧದಲ್ಲಿ ನಡೆಸಲು ಅನುಮತಿ ಕೋರಿದ್ದೇವೆ ಎಂದು ಕೆಎಸ್ಸಿಎ ಅಧ್ಯಕ್ಷ ರಘುರಾಮ್ ಭಟ್, ಕಾರ್ಯದರ್ಶಿ ಶಂಕರ್ ಮತ್ತು ಖಜಾಂಚಿ ಜಯರಾಮ್ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.