ಚಿತ್ರದುರ್ಗ : ಜಿಲ್ಲೆಯಲ್ಲಿ ಕಳೆದ ಮಾರ್ಚ್ 01 ರಿಂದ 20ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಗೆ ಪರೀಕ್ಷೆ-1ರಲ್ಲಿ ಶೇ.59.87 ರಷ್ಟು ಫಲಿತಾಂಶ ಲಭಿಸಿದೆ.
ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 4,590 ವಿದ್ಯಾರ್ಥಿಗಳ ಪೈಕಿ 1,684 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 3,746 ವಿದ್ಯಾರ್ಥಿಗಳ ಪೈಕಿ 2,192 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 6,425 ವಿದ್ಯಾರ್ಥಿಗಳ ಪೈಕಿ 4,330 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ 14761 ವಿದ್ಯಾರ್ಥಿಗಳ ಪೈಕಿ 8206 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಪರೀಕ್ಷೆಗೆ ಹಾಜರಾದ 13,426 ರೆಗ್ಯುಲರ್ ವಿದ್ಯಾರ್ಥಿಗಳ ಪೈಕಿ 8,038 ತೇರ್ಗಡೆಯಾಗಿದ್ದಾರೆ. 1,082 ಪುನರಾವರ್ತಿತ ವಿದ್ಯಾರ್ಥಿಗಳ ಪೈಕಿ 107 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಹಾಗೂ 253 ಖಾಸಗಿ ವಿದ್ಯಾರ್ಥಿಗಳ ಪೈಕಿ 61 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ನಗರ ಪ್ರದೇಶದಲ್ಲಿ ಪರೀಕ್ಷೆಗೆ ಹಾಜರಾದ 9,926 ವಿದ್ಯಾರ್ಥಿಗಳ ಪೈಕಿ 5,471 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷೆ ಹಾಜರಾದ 4,835 ವಿದ್ಯಾರ್ಥಿಗಳ ಪೈಕಿ 2,735 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳ ವಿವರ: ಕಲಾ ವಿಭಾಗದಲ್ಲಿ ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆಯ ಬಿ.ಲಿಂಗಯ್ಯ ಪಿ.ಯು ಕಾಲೇಜು ವಿದ್ಯಾರ್ಥಿ ಪಾಂಡುರಂಗ ಆನೆಗೊಂದಿ 586 (ಶೇ.97.66) ಅಂಕ ಗಳಿಸುವುದರೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಹೊಳಲ್ಕೆರೆ ತಾಲ್ಲೂಕಿನ ಮುತ್ತಗದೂರು ಗ್ರಾಮದ ತರಳಬಾಳು ಪಿಯು ಕಾಲೇಜಿನ ಅಂಜುಮನ್ ಬಾನು ಹೆಚ್.ಎಸ್ 581 (ಶೇ.96.83) ಹಾಗೂ ಮೊಳಕಾಲ್ಮೂರು ತಾಲ್ಲೂಕಿನ ಚಿಕ್ಕೋಬನಹಳ್ಳಿ ಶ್ರೀ.ಆಂಜನೇಯ ಪಿಯು ಕಾಲೇಜಿನ ಸಮೀನ ಜೆ. 579 (ಶೇ.96.5) ಅಂಕಗಳಿಸುವುದರೊಂದಿಗೆ ಅನುಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಚಿತ್ರದುರ್ಗ ನಗರದ ಎಸ್.ಆರ್.ಎಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಇಶಿತಾ ಬಿ.ಎನ್ 592 (ಶೇ.98.66), ಸಾಕ್ಷಿ ಎಸ್.ಬಿ 589 (ಶೇ.98.16) ಹಾಗೂ ರಿಯ ಎಸ್ ಕೊಠಾರಿ 588 (ಶೇ.588) ಅಂಕಗಳನ್ನು ಗಳಿಸುವ ಮೂಲಕ ಅನುಕ್ರಮವಾಗಿ ಜಿಲ್ಲೆಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಚಿತ್ರದುರ್ಗ ನಗರದ ಡಾನ್ ಬಾಸ್ಕೋ ಪಿಯು ಕಾಲೇಜು ವಿದ್ಯಾರ್ಥಿ ಮಾರುತಿ ಎಂ 593 (ಶೇ.98.83) ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾನೆ. ಚಿತ್ರದುರ್ಗ ನಗರದ ಎಸ್.ಆರ್.ಎಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ವಿಜೇತರೆಡ್ಡಿ ಬಿ.ಸಿ 589 (ಶೇ.98.16) ಹಾಗೂ ಅಮರೇಶ್ 587 (ಶೇ.97.83) ಅಂಕಗಳನ್ನು ಗಳಿಸುವ ಮೂಲಕ ಅನುಕ್ರಮವಾಗಿ ಜಿಲ್ಲೆಗೆ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
BIG NEWS: ರಾಜ್ಯದಲ್ಲಿ ಮಾರಾಟವಾಗುತ್ತಿರುವ ‘ಔಷಧಿಗಳ ಗುಣಮಟ್ಟ’ದ ಬಗ್ಗೆ ‘ಆರೋಗ್ಯ ಇಲಾಖೆ’ ಶಾಕಿಂಗ್ ಮಾಹಿತಿ ಬಿಡುಗಡೆ
BREAKING: ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಮಾಹಿತಿ