ಚಿತ್ರದುರ್ಗ : ಚಿತ್ರದುರ್ಗದಲ್ಲಿ ಘೋರ ಘಟನೆ ಒಂದು ನಡೆದಿದ್ದು, ಸರ್ಕಾರಿ ಆಸ್ಪತ್ರೆ ಚಾವಣಿಯ ಸಿಮೆಂಟ್ ಕುಸಿದು ಬಾಣಂತಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕು ಆಸ್ಪತ್ರೆಯಲ್ಲಿ ಈ ಒಂದು ಘಟನೆ ಸಂಭವಿಸಿದೆ.
ಚಾವಣಿಯ ಸಿಮೆಂಟ್ ಕುಸಿದು ಬಾಣಂತಿ ಅಬ್ಜ ಕೌಸರ್ (36) ಎನ್ನುವ ಬಾಣಂತಿಗೆ ಗಾಯಗಳಾಗಿದ್ದು, ಹಿರಿಯೂರಿನ ಸರಕಾರಿ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ವಾರ್ಡ್ ನಲ್ಲಿ ಘಟನೆ ನಡೆದಿದೆ. ಹಿರಿಯೂರು ಸರ್ಕಾರಿ ಆಸ್ಪತ್ರೆಯ ವ್ಯವಸ್ಥೆಯ ಬಗ್ಗೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಪ್ರತಿನಿಧಿಸುವ ಹಿರಿಯೂರಲ್ಲೇ ಇಂತಹ ಘಟನೆ ನಡೆದಿದ್ದು ಸ್ಥಳೀಯರು ಕಿಡಿ ಕಾರಿದ್ದಾರೆ.








