ಚಿತ್ರದುರ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಚುನಾವಣೆ ಘೋಷಣೆಯಾಗಿದೆ. ಈ ಬೆನ್ನಲ್ಲೇ ಜಿಲ್ಲಾ ಸಂಘಗಳ ಚುನಾವಣೆ ಪ್ರಕ್ರಿಯೆಯೂ ಗರಿಗೆದರಿದೆ. ಇಂದು ಚಿತ್ರದುರ್ಗ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚುನಾವಣೆಗೆ ಚುನಾವಣಾಧಿಕಾರಿಯಾಗಿ ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಣುಖ ನೇಮಕಗೊಳಿಸಲಾಯಿತು.
ಇಂದು ಈ ಸಂಬಂಧ ಚಿತ್ರದುರ್ಗದ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ ಟೆಲೆಕ್ಸ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ 2025-28ನೇ ಸಾಲಿನ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣಾಧಿಕಾರಿಯಾಗಿ ಹಿರಿಯ ಪತ್ರಕರ್ತ ಚಿಕ್ಕಪನಹಳ್ಳಿ ಷಣ್ಮುಖ ಅವರನ್ನು ನೇಮಕ ಮಾಡಿ ಆದೇಶಿಸದರು.
ಈ ಬಳಿಕ ಚಿತ್ರದುರ್ಗ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ನೂತನ ಚುನಾವಣಾಧಿಕಾರಿಯಾಗಿ ನೇಕಗೊಂಡ ಹಿರಿಯ ಪತ್ರಕರ್ತ ಚಿಕ್ಕಪನಹಳ್ಳಿ ಷಣ್ಣುಖ ಅವರು ಅಧಿಕಾರವನ್ನು ವಹಿಸಿಕೊಂಡರು.
ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದಂತ ದಿನೇಶ್ ಗೌಡಗೆರೆ, ಖಜಾಂಚಿ ಡಿ.ಕುಮಾರಸ್ವಾಮಿ, ಕಾರ್ಯದರ್ಶಿ ವೀರೇಶ್ ವಿ ಚಳ್ಳಕೆರೆ ಉಪಸ್ಥಿತರಿದ್ದರು.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
GOOD NEWS: ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 2-3 ದಿನಗಳಲ್ಲಿ ಆಗಸ್ಟ್ ತಿಂಗಳ ಹಣ ಖಾತೆಗೆ ಜಮಾ