ಚಿತ್ರದುರ್ಗ: ಜಿಲ್ಲೆಯಲ್ಲಿ ಧಾರುಣ ಘಟನೆಯೊಂದು ನಡೆದಿದೆ. ಕೃಷಿ ಹೊಂಡದಲ್ಲಿ ಮುಳುಗಿ ತಂದೆ-ಮಗ ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ಚಿತ್ರದುರ್ಗ ತಾಲ್ಲೂಕಿನ ಹುಲ್ಲೂರು ಸಿಂಗಾಪುರದಲ್ಲಿ ಕೃಷಿ ಹೊಂಡಕ್ಕೆ ಬಿದ್ದಂತ ಮಗನನ್ನು ರಕ್ಷಣೆ ಮಾಡಲು ಹೋಗಿ ತಂದೆಯೂ ಸಾವನ್ನಪ್ಪಿದ್ದಾರೆ. ಈಜಾಡಲು ಹೋಗಿ ನೀರಲ್ಲಿ ಮುಳುಗಿ ತಂದೆ ಬಸವರಾಜ (50) ಹಾಗೂ ಪುತ್ರ ಆಕಾಶ್ (15) ಸಾವನ್ನಪ್ಪಿದ್ದಾರೆ.
ಈ ವಿಷಯ ತಿಳಿದು ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಸರ್ಕಾರಿ ಅಧಿಕಾರಿ, ನೌಕರರ ಗಮನಕ್ಕೆ: ‘ಸರ್ವೋತ್ತಮ ಸೇವಾ ಪ್ರಶಸ್ತಿ’ಗೆ ಅರ್ಜಿ ಆಹ್ವಾನ
ರಾಜ್ಯ ಸರ್ಕಾರದಿಂದ ಡೀಸೆಲ್ ಬೆಲೆ ಲೀಟರ್ ಗೆ 2 ರೂಪಾಯಿ ಏರಿಕೆ: ಆರ್.ಅಶೋಕ್ ಕಿಡಿಕಿಡಿ