ಚಿತ್ರದುರ್ಗ: ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಾಧಿಕಾರಿಯೊಬ್ಬರು ಕೆಲಸಕ್ಕೆ ಅನಧಿಕೃತವಾಗಿ ಗೈರಾಗಿದ್ದಲ್ಲದೇ, ಅನುಚಿತವಾಗಿ ವರ್ತನೆ ತೋರಿದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಯಲ್ಲದಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಾಧಿಕಾರಿ ಎಸ್.ಜೆ ಸೋಮಶೇಖರ್ ಎಂಬುವರೇ ಅಮಾನತುಗೊಂಡವರಾಗಿದ್ದಾರೆ.
ಎಸ್.ಜೆ ಸೋಮಶೇಖರ್ ಯಲ್ಲದಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಶ್ರೂಷಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೆಲಸಕ್ಕೆ ಗೈರು ಹಾಜರಾಗಿದ್ದಲ್ಲದೇ, ಕರ್ತವ್ಯದ ವೇಳೆ ಪಾನಮತ್ತರಾಗಿ ಮೇಲಧಿಕಾರಿಗಳೊಂದಿಗೆ ಅನುಚಿತವಾದಂತ ವರ್ತನೆ ತೋರಿದಂತ ಆರೋಪ ಕೇಳಿ ಬಂದಿತ್ತು.
ಈ ಸಂಬಂಧ ಟಿಹೆಚ್ಓ ಅವರು ಚಿತ್ರದುರ್ಗ ಜಿಲ್ಲಾ ಪಂಚಾಯ್ತಿ ಸಿಇಓಗೆ ವರದಿಯನ್ನು ಸಲ್ಲಿಸಿದ್ದರು. ಈ ವರದಿಯನ್ನು ಆಧರಿಸಿ ಯಲ್ಲದಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸಿಂಗ್ ಆಫೀಸರ್ ಎಸ್ ಜೆ ಸೋಮಶೇಖರ್ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.
‘ಕರ್ನಾಟಕದ ಇತಿಹಾಸ’ಕ್ಕೆ ಹೊಸ ಸೇರ್ಪಡೆ: ಇದೀಗ ಹೊಸತೊಂದು ‘ತಾಮ್ರ ಪಟದ ಶಾಸನ’ ಬೆಳಕಿಗೆ
‘ಕೋರ್ಟ್ ಕೇಸ್ ಇತ್ಯರ್ಥ’ದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಜು.12ರಂದು ‘ರಾಷ್ಟ್ರೀಯ ಲೋಕ್ ಅದಾಲತ್’