ಚಿತ್ರದುರ್ಗ: ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರ ವಿರುದ್ಧ ಪೋಕ್ಸೋ ಕೇಸ್ ( POSCO Case ) ದಾಖಲಾಗಿತ್ತು. ಈ ಪ್ರಕರಣದಲ್ಲಿ ಮುರುಘಾ ಶ್ರೀಗಳು ಜೈಲು ಪಾಲಾಗಿದ್ದಾರೆ. ಇದೇ ಪ್ರಕರಣದಲ್ಲಿ 4ನೇ ಆರೋಪಿಯಾಗಿದ್ದಂತ ಮುರುಘಾ ಮಠದ ( Murugha Matt ) ಕಾರ್ಯದರ್ಶಿ ಪರಮಶಿವಯ್ಯ ಅವರನ್ನು ಪೊಲೀಸರು ( Karnataka Police ) ಇಂದು ಬಂಧಿಸಿದ್ದಾರೆ.
BIG NEWS: ‘KSRTC ಬಸ್ ಲಗೇಜ್ ನಿಯಮ’ ಪರಿಷ್ಕರಣೆ: ಇನ್ಮುಂದೆ 30 ಕೆಜಿ ವರೆಗೆ ಉಚಿತ, ನಾಯಿಗೆ ಅರ್ಧ ಟಿಕೆಟ್
ಮುರುಘಾ ಶ್ರೀಗಳ ( Murugha Sri ) ವಿರುದ್ಧ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿತ್ತು. ಇದೇ ಪ್ರಕರಣದಲ್ಲಿ ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಈಗಾಗಲೇ ಪ್ರಕರಣದಲ್ಲಿ ಮುರುಘಾ ಶ್ರೀ ಸೇರಿದಂತೆ ಅನೇಕರನ್ನು ಪೊಲೀಸರು ಬಂಧಿಸಿದ್ದಾರೆ.
ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ವಿಚಾರ: ಕಾನೂನು ತಜ್ಞರ ಮೊರೆ ಹೋಗ ರಾಜ್ಯ ಸರ್ಕಾರ
ಇದೀಗ ಇಂದು ಬೆಳಿಗ್ಗೆ ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಕೇಸ್ ನಲ್ಲಿ 4ನೇ ಆರೋಪಿಯಾಗಿದ್ದಂತ ಮುರುಘಾ ಮಠದ ಕಾರ್ಯದರ್ಶಿ ಪರಮಶಿವಯ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ಬಳಿಕ ಇದೀಗ ಅವರನ್ನು ಪ್ರಕರಣ ಸಂಬಂಧ ಬಂಧಿಸಿರೋದಾಗಿ ತಿಳಿದು ಬಂದಿದೆ.
ಬೆಂಗಳೂರಿನ ಏರ್ ಪೋರ್ಟ್ ಫ್ಲೈ ಓವರ್ ನಲ್ಲಿ ಭೀಕರ ಅಪಘಾತ : ಇಬ್ಬರು ಬೈಕ್ ಸವಾರರ ದುರ್ಮರಣ
ಅಂದಹಾಗೇ ಮುರುಘಾ ಶ್ರೀ ವಿರುದ್ಧ ಎರಡು ಪೋಕ್ಸೋ ಕೇಸ್ ದಾಖಲಾಗಿದೆ. ಮೊದಲನೇ ಪ್ರಕರಣದಲ್ಲಿ ಶ್ರೀಗಳು ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಈ ಬಳಿಕ ಎರಡನೇ ಪ್ರಕರಣ ಕೂಡ ದಾಖಲಾಗಿದ್ದು, ಆ ಸಂಬಂಧದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ.