ಚಿತ್ರದುರ್ಗ: ಜಿಲ್ಲೆ ಹಿರಿಯೂರು ನಗರದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವಂತ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಹೊರವಲಯದ ಚಳ್ಳಕೆರೆ ರಸ್ತೆಯ ಚಿನ್ನಯ್ಯನಹಟ್ಟಿ ಗೇಟ್ ಬಳಿ ಎರಡು ಬೈಕ್ ಗಳು ಮುಖಾಮುಖಿಯಾಗಿ ಓರ್ವ ಯುವಕ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭರತ್ (20) ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಗಾಯಗೊಂಡಿರುವವರನ್ನು ಎಂಡಿ ಕೋಟೆ ಗ್ರಾಮದ ರಾಜಪ್ಪ, ಇಂದಿರಮ್ಮ ಎಂದು ಗುರುತಿಸಲಾಗಿದೆ. ಈ ಬಗ್ಗೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ACF, RFO, DRF ನೇಮಕಾತಿ’ಗೆ ‘ಬಿಎಸ್ಸಿ ಅರಣ್ಯಶಾಸ್ತ್ರ ಪದವಿ’ ಕಡ್ಡಾಯಗೊಳಿಸಿ: ವಿದ್ಯಾರ್ಥಿಗಳ ಒತ್ತಾಯ