ಚಿತ್ರದುರ್ಗ: ಹಿರಿಯೂರು ತಾಲೂಕಿನ ಹೊಸಯಳನಾಡು ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ಒಬ್ಬರು ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುವ ವೇಳೆಯಲ್ಲಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊಸಯಳನಾಡು ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ಆನಂದ್ ಎಂಬುವರು ಇಂದಿರಾ ಅವಾಸ್ ಯೋಜನೆಯಡಿ ಮಂಜೂರಾಗಿದ್ದಂತ ಮನೆಯ ಬಿಲ್ ಮಂಜೂರಾತಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಈ ಸಂಬಂಧ ವ್ಯಕ್ತಿಯೊಬ್ಬರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಹೊಸಯಳನಾಡು ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ಆನಂದ್ ಲಂಚದ ಹಣವಾಗಿ 30 ಸಾವಿರ ಸ್ವೀಕರಿಸುತ್ತಿದ್ದಾಗ, ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಇದೀಗ ಬಿಲ್ ಕಲೆಕ್ಟರ್ ಆನಂದ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವಂತ ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
BREAKING: ಮಣಿಪುರದಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಗೆ ಅದ್ಧೂರಿ ಚಾಲನೆ
‘ಮಾಶಾಸನ’ಕ್ಕಾಗಿ 5 ಕಿಮೀ ದೂರ ತೆವಳಿದ ‘ವೃದ್ಧೆ’: ‘ಗ್ಯಾರಂಟಿ’ ಕೊಟ್ಟ ಸರ್ಕಾರಕ್ಕೆ ಕರುಣೆ ಇಲ್ಲವೆಂದ ‘HDK’