ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಗಾಯತ್ರಿ ಡ್ಯಾಂ ಸೇರಿದಂತೆ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವಂತ ರೈತರು ನಡೆಸುತ್ತಿರುವಂತ ಉಪವಾಸ ಸತ್ಯಾಗ್ರಹ ತೀವ್ರಗೊಂಡಿದೆ. ಈವರೆಗೆ ಮೂವರು ರೈತರು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಗಾಯತ್ರಿ ಡ್ಯಾಂ ಸೇರಿದಂತೆ ಎಲ್ಲಾ ಕೆರೆಗಳಿಗೆ ನೀರು ಹರಿಸುವಂತೆ ರೈತರು ಅಮರಣಾಂತರ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇಂದಿಗೆ ಐದನೇ ದಿನಕ್ಕೆ ಅಮರಾಣಂತರ ಉಪವಾಸ ಸತ್ಯಾಗ್ರಹ ಕಾಲಿಟ್ಟಿದೆ.
ಎರಡನೇ ದಿನಕ್ಕೆ ಕಾಲಿಟ್ಟಿದ್ದಂತ ಉಪವಾಸ ಸತ್ಯಾಗ್ರಹದ ಸಂದರ್ಭದಲ್ಲಿ 70 ವರ್ಷದ ರೈತ ಈರಣ್ಯ ಎಂಬುವರು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಿಪಿ, ಶುಗರ್, ಆಯಾಸದಿಂದ ಅಸ್ವಸ್ಥಗೊಂಡಿದ್ದಂತ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.
ನಿನ್ನೆ ಹಿರಿಯೂರು ತಾಲ್ಲೂಕು ಕಚೇರಿ ಮುಂಭಾಗದಲ್ಲಿನ ರೈತರ ಅಮರಣಾಂತರ ಉಪವಾಸ ಸತ್ಯಾಗ್ರಹದ ವೇಳಎಯಲ್ಲಿ ರೈತ ಸಂಘದ ಅಧ್ಯಕ್ಷ ಕೆ.ಟಿ ತಿಪ್ಪೇಸ್ವಾಮಿ(48) ಅವರು ಅಸ್ವಸ್ಥಗೊಂಡಿದ್ದರು. ಆದರೂ ಪಟ್ಟು ಬಿಡದೇ ರೈತರು ಉಪವಾಸ ಸತ್ಯಾಗ್ರಹ ಮುಂದುವರೆಸಿದ್ದು, ಸ್ಥಳಕ್ಕೆ ಸಣ್ಣ ನೀರಾವರಿ ಸಚಿವ ಎನ್ ಎಸ್ ಭೋಸರಾಜು ಅವರು ಆಗಮಿಸುವಂತೆ ಪಟ್ಟು ಹಿಡಿದಿದ್ದಾರೆ.
ಈರಣ್ಣ, ಕೆ.ಟಿ ತಿಪ್ಪೇಸ್ವಾಮಿ ನಂತ್ರ ಇಂದು ತಿಮ್ಮಣ್ಣ ಎಂಬ ರೈತ ಕೂಡ ಅಸ್ವಸ್ಥಗೊಂಡಿದ್ದಾರೆ. ಹೀಗಾಗಿ ಅಮರಣಾಂತರ ಉಪವಾಸ ಸತ್ಯಾಗ್ರಹದಿಂದಾಗಿ ಅಸ್ವಸ್ಥಗೊಂಡ ರೈತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಹೀಗಿದ್ದರೂ ಸ್ಥಳಕ್ಕೆ ಯಾವುದೇ ಒಬ್ಬ ಜನಪ್ರತಿನಿಧಿಗಳು ಆಗಮಿಸಿ, ರೈತರ ಬೇಡಿಕೆ ಆಲಿಸದೇ ಇರುವುದು ವಿಪರ್ಯಾಸವೇ ಸರಿ.
ವರದಿ: ವಸಂತ ಬಿ ಈಶ್ವರಗೆರೆ
ಕೊಪ್ಪಳ ಪ್ರವಾಸಿಗರ ಮೇಲೆ ಹಲ್ಲೆ, ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ಕೇಸ್: ಇಬ್ಬರು ಆರೋಪಿಗಳು ಅರೆಸ್ಟ್
ಮ್ಯೂಚುವಲ್ ಫಂಡ್ ಹೂಡಿಕೆಯಲ್ಲಿ ಪುರುಷರಿಗಿಂತ ಮಹಿಳಾ ಹೂಡಿಕೆದಾರರು ಮೇಲುಗೈ ಸಾಧಿಸಿದ್ದಾರೆ: ವರದಿ | Mutual fund