ಚಿತ್ರದುರ್ಗ: ಜಿಲ್ಲೆಯ ಭರಮಸಾಗರದ ಬಳಿಯಲ್ಲಿ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಪರಿಣಾಮ ಕಾರಿನಲ್ಲಿದ್ದಂತ ದಂಪತಿಗಳಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರೋ ಘಟನೆ ನಡೆದಿದೆ.
ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದ ಬಳಿಯಲ್ಲಿ ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿಯಾದ ಪರಿಣಾಮ, ಕಾರಿನಲ್ಲಿದ್ದಂತ ನಿವೃತ್ತ ಡಿವೈಎಸ್ಪಿ ಜಯರಾಂ ನಾಯಕ್ ಹಾಗೂ ಅವರ ಪತ್ನಿ ಲತಾ ಎಂಬುವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತ ದಂಪತಿಗಳು ದಾವಣಗೆರೆ ಮೂಲದವರು ಎಂಬುದಾಗಿ ತಿಳಿದು ಬಂದಿದೆ.
ಬೆಂಗಳೂರಿನಿಂದ ದಾವಣಗೆರೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ಭರಮಸಾಗರದ ಬಳಿಯಲ್ಲಿ ಕಾರು ಅಪಘಾತಗೊಂಡಿದೆ. ಭರಮಸಾಗರ ಠಾಣಾ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ ಬಳಿ ಲಾರಿ & ಕಾರಿನ ನಡುವೆ ಅಪಘಾತವಾಗಿರುವ ಕುರಿತು ಹೊಯ್ಸಳ-3ರ ಅಧಿಕಾರಿ & ಸಿಬ್ಬಂದಿಯವರು ಸ್ಥಳಕ್ಕೆ ಭೇಟಿ ನೀಡಿ, ಸ್ಥಳದಲ್ಲೇ ಮೃತ ಪಟ್ಟಿದ್ದ ಇಬ್ಬರು ವ್ಯಕ್ತಿಗಳ ಮೃತ ದೇಹಗಳನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿರುತ್ತಾರೆ.