ಚಿತ್ರದುರ್ಗ : ರೈತರ ಪಹಣಿ ಪ್ರತ್ಯೇಕ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಪಂಚಾಯತಿ ಗ್ರಾಮ ಲೆಕ್ಕಿಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ನಡೆದಿದೆ.
ಹೌದು ಹಿರಿಯೂರು ಪಟ್ಟಣದಲ್ಲಿ ಗ್ರಾಮ ಲೆಕ್ಕೀಗ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲಗಲದ್ದಿ ಗ್ರಾಮ ಪಂಚಾಯಿತಿ ಗ್ರಾಮಲೆಕ್ಕಿಗ ನಾಗಪ್ಪ ಲಮಾಣಿ ರೇಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾನೆ ಎಂದು ತಿಳಿದುಬಂದಿದೆ.
ಪಹಣಿ ಪ್ರತ್ಯೇಕ ಮಾಡಿಕೊಡಲು ಹಲಗಲದ್ದಿ ಗ್ರಾಮದ ತಿಪ್ಪೇಸ್ವಾಮಿ ಬಳಿ 9 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾನೆ. ಹಿರಿಯೂರು ತಾಲೂಕು ಕಚೇರಿ ಆವರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಲೋಕಾಯುಕ್ತ ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿದೆ.