Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

04/05/2026 9:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೈದರಾಬಾದ್ `ಫಿಲ್ಮ್ ಸಿಟಿ’ ಮಾದರಿಯಲ್ಲಿ ಮೈಸೂರಿನಲ್ಲಿ `ಚಿತ್ರನಗರಿ’ ನಿರ್ಮಾಣ : CM ಸಿದ್ದರಾಮಯ್ಯ
KARNATAKA

ಹೈದರಾಬಾದ್ `ಫಿಲ್ಮ್ ಸಿಟಿ’ ಮಾದರಿಯಲ್ಲಿ ಮೈಸೂರಿನಲ್ಲಿ `ಚಿತ್ರನಗರಿ’ ನಿರ್ಮಾಣ : CM ಸಿದ್ದರಾಮಯ್ಯ

By kannadanewsnow5704/11/2025 6:21 AM

ಮೈಸೂರು : ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣಕ್ಕೆ 160 ಎಕರೆ ಜಾಗ ಗುರುತಿಸಲಾಗಿದ್ದು, ಡಿಸೆಂಬರ್ ವೇಳೆಗೆ ಡಿಪಿಆರ್ ಸಿದ್ದವಾಗಲಿದ್ದು, ಹೈದರಾಬಾದ್ ಫಿಲಂ ಸಿಟಿ ಮಾದರಿಯಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ 2018 ಮತ್ತು 19ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು. ಡಾ.ರಾಜ್ ಕುಮಾರ್ ಅವರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು. ಈ ಕಾರಣಕ್ಕೇ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ.

ಸಿನಿಮಾ ಅತ್ಯಂತ ಪ್ರಭಾವೀ ಮಾಧ್ಯಮ. ಸಮಾಜದ ಮೇಲೆ ಆಳವಾದ ಪರಿಣಾಮ ಬೀರುತ್ತದೆ. ಆದ್ದರಿಂದ ಸಿನಿಮಾ ತಾರೆಯರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅಷ್ಟೇ ಮೌಲ್ಯಯುತವಾಗಿ ಬದುಕಬೇಕು. ಸಮಾಜವನ್ನು ತಿದ್ದುವ ಸಿನಿಮಾಗಳನ್ನು ಹೆಚ್ಚೆಚ್ಚು ತಯಾರಿಸಿದರೆ ಅದರಿಂದ ಬದಲಾವಣೆ ಸಾಧ್ಯ.
ನಮ್ಮ ಸರ್ಕಾರ ಕನ್ನಡ ಸಿನಿಮೋದ್ಯಮದ ಆರೋಗ್ಯಕಾರಿ ಪ್ರಗತಿ ಮತ್ತು ಬೆಳವಣಿಗೆಗೆ ಸದಾ ಬೆಂಬಲ ನೀಡುತ್ತದೆ. ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ. ಒಳ್ಳೆ ಸಿನಿಮಾ ಮಾಡಿ, ಜನ ಮೆಚ್ಚುವ, ಸಮಾಜದ ಮೇಲೆ ಉತ್ತಮ ಪರಿಣಾಮ ಬೀರುವ ಸಿನಿಮಾ ಮಾಡಿದರೆ ಸಬ್ಸಿಡಿ ನೀಡಿದ್ದಕ್ಕೂ ಸಾರ್ಥಕವಾಗುತ್ತದೆ. ಸದ್ಯ ಬಾಕಿ ಇರುವ ಎಲ್ಲಾ ವರ್ಷದ ಸಬ್ಸಿಡಿಯನ್ನೂ ಒಟ್ಟಿಗೇ ನೀಡಲಾಗುವುದು.

ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಚಿತ್ರನಗರಿ ಮಾಡಲು 160 ಎಕರೆ ಜಾಗವನ್ನು ವಾರ್ತಾ ಇಲಾಖೆಗೆ ಹಸ್ತಾಂತರಿಸಲಾಗಿದೆ. ಎರಡು ತಿಂಗಳಲ್ಲಿ ಕಾನೂನು ಪ್ರಕ್ರಿಯೆ ಮುಗಿಸಿ ಚಿತ್ರನಗರಿ ನಿರ್ಮಾಣ ಕಾರ್ಯ ಆರಂಭವಾಗಲಿದೆ.

ಹಿಂದಿನ ಸರ್ಕಾರ ಆಯಾ ವರ್ಷವೇ ಚಲನಚಿತ್ರ ಪ್ರಶಸ್ತಿಗಳನ್ನು ವಿತರಿಸದ ಕಾರಣಕ್ಕೇ 2018ನೇ ಸಾಲಿನಿಂದ ಪ್ರಶಸ್ತಿಗಳು ಬಾಕಿ ಉಳಿದಿವೆ. ಇದು ತಪ್ಪು ಹೀಗಾಗಬಾರದು. ಆದ್ದರಿಂದ ನಮ್ಮ ಸರ್ಕಾರ ಇನ್ನು ಮುಂದೆ ಪ್ರತೀ ವರ್ಷ ಸಿನಿಮಾ ಪ್ರಶಸ್ತಿಗಳನ್ನು ನೀಡಲಿದೆ.
ಆಯಾ ವರ್ಷದ ಸಿನಿಮಾಗಳಿಗೆ ಮರು ವರ್ಷವೇ ಪ್ರಶಸ್ತಿ ಕೊಟ್ಟರೆ ಮಾತ್ರ ಅರ್ಥಪೂರ್ಣ ಆಗಿರುತ್ತದೆ. ಇಂದು ಎರಡು ವರ್ಷದ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಕೆಲವೇ ದಿನಗಳಲ್ಲಿ ಹಳೆ ಸರ್ಕಾರದ ಅವಧಿಯ ಇನ್ನೆರಡು ವರ್ಷದ ಸಿನಿಮಾ ಪ್ರಶಸ್ತಿಗಳನ್ನು ನೀಡಲು ಸೂಚನೆ ನೀಡಿದ್ದೇನೆ. ಬಳಿಕ ಆಯಾ ವರ್ಷದ ಪ್ರಶಸ್ತಿಗಳನ್ನು ಮರು ವರ್ಷದ ಆರಂಭದಲ್ಲೇ ನೀಡಲು ಕ್ರಮ ತೆಗೆದುಕೊಳ್ಳುತ್ತೇವೆ.

ಮೊದಲೆಲ್ಲಾ ಸಿನಿಮಾಗಳ ಸಂಖ್ಯೆ ಕಡಿಮೆ ಇತ್ತು. ನಾವು ನೋಡಿದ್ದನ್ನೇ ಮತ್ತೆ ಮತ್ತೆ ನೋಡುತ್ತಿದ್ದೆವು. ಈಗ ಸಿಕ್ಕಾಪಟ್ಟೆ ಸಿನಿಮಾಗಳು ಬರುತ್ತಿವೆ. ಆದರೆ, ಸಾಮಾಜಿಕ ಕಾಳಜಿ ಮತ್ತು ಗುಣಮಟ್ಟ ಕಡಿಮೆ ಆಗುತ್ತಿದೆ. ಆದ್ದರಿಂದ ಈಗ ಸಿನಿಮಾ ನೋಡುವುದನ್ನೇ ಕಡಿಮೆ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು. ಡಾ.ರಾಜ್ ಕುಮಾರ್ ಅವರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು. ಈ ಕಾರಣಕ್ಕೇ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ.

ಸಿನಿಮಾ ಅತ್ಯಂತ ಪ್ರಭಾವೀ ಮಾಧ್ಯಮ. ಸಮಾಜದ ಮೇಲೆ ಆಳವಾದ ಪರಿಣಾಮ ಬೀರುತ್ತದೆ.… pic.twitter.com/2lPxJtepvL

— CM of Karnataka (@CMofKarnataka) November 3, 2025

'Chitranagari' to be built in Mysore on the model of Hyderabad's 'Film City': CM Siddaramaiah
Share. Facebook Twitter LinkedIn WhatsApp Email

Related Posts

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM1 Min Read

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM1 Min Read

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM2 Mins Read
Recent News

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

04/05/2026 9:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM
State News
KARNATAKA

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

By kannadanewsnow0904/05/2026 9:54 PM KARNATAKA 1 Min Read

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ (UDF) ಮೈತ್ರಿಕೂಟವು ಭರ್ಜರಿ ಜಯಭೇರಿ ಬಾರಿಸಿದೆ. ಈ ಚುನಾವಣಾ ಯಶಸ್ಸಿನಲ್ಲಿ ಕರ್ನಾಟಕದ ವಸತಿ…

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM

ಸಾಗರದ ಬೇಸೂರು ಅಣು ಸ್ಥಾವರಕ್ಕೆ ವಿರೋಧ: ದಾಖಲೆ ನೀಡದಿದ್ದರೆ ಕಾನೂನುಭಂಗ ಚಳವಳಿ- ತೀ.ನ.ಶ್ರೀನಿವಾಸ್ ಎಚ್ಚರಿಕೆ

04/05/2026 8:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.