ಭೋಪಾಲ್(ಮಧ್ಯಪ್ರದೇಶ): ಭೋಪಾಲ್ ನೀರು ಸಂಸ್ಕರಣಾ ಘಟಕದಲ್ಲಿ ನೀರನ್ನು ಸ್ವಚ್ಛಗೊಳಿಸಲು ಅಳವಡಿಸಲಾಗಿದ್ದ ಕ್ಲೋರಿನ್ ಅನಿಲ ಸೋರಿಕೆಯಾಗಿದೆ. ಇದರಿಂದಾಗಿ ಹಲವರಿಗೆ ಉಸಿರಾಟದ ತೊಂದರೆಯುಂಟಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಧ್ಯಪ್ರದೇಶದ ಭೋಪಾಲ್ನಲ್ಲಿರುವ ನೀರು ಶುದ್ಧೀಕರಣ ಘಟಕದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಈ ಘಟನೆಯಿಂದಾಗಿ ಇನ್ನೂ ಅನೇಕರು ಅನಾರೋಗ್ಯಕ್ಕೆ ಒಳಗಾಗಿದ್ದು, ಅವರ ಕಣ್ಣುಗಳಲ್ಲಿ ಕಿರಿಕಿರಿ ಮತ್ತು ಉಸಿರಾಟದ ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ದೇ, ಅನಿಲ ಸೋರಿಕೆಯಿಂದ ಅನೇಕ ಜನರು ಮನೆಯಿಂದ ಹೊರಗೋಡಿ ಬಂದಿದ್ದಾರೆ.
मध्यप्रदेश की राजधानी भोपाल की मदर इंडिया कॉलोनी में क्लोरीन गैस टैंक के लिकेज होने से लोगों को आँखो में जलन एवं साँस लेने में तकलीफ़ व कुछ लोगों के अस्पताल में भर्ती होने की ख़बर सामने आयी है।
— Kamal Nath (@OfficeOfKNath) October 26, 2022
ಘಟನೆಯ ಬಗ್ಗೆ ಮಾಹಿತಿ ಪಡೆದ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಕೈಲಾಶ್ ಸಾರಂಗ್ ಅವರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಘಟನಾ ಸ್ಥಳಕ್ಕೆ ಭೋಪಾಲ್ ಜಿಲ್ಲಾಧಿಕಾರಿ ಹಾಗೂ ಮುನ್ಸಿಪಲ್ ಕಾರ್ಪೊರೇಷನ್ ಕಮಿಷನರ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ನೀರು ಸಂಸ್ಕರಣಾ ಘಟಕದಲ್ಲಿ ಅಳವಡಿಸಲಾಗಿರುವ 900 ಕೆಜಿ ತೂಕದ ಕ್ಲೋರಿನ್ ಗ್ಯಾಸ್ ಸಿಲಿಂಡರ್ನ ನಳಿಕೆಯು ಅಸಮರ್ಪಕ ಕಾರ್ಯದಿಂದ ಸೋರಿಕೆಯಾಗಲು ಪ್ರಾರಂಭಿಸಿದೆ ಎಂದು ನಾಗರಿಕ ಸಮಿತಿಯ ತಂಡವು ಕಂಡುಹಿಡಿದಿದೆ.
ಈ ಪ್ರದೇಶದಲ್ಲಿ ಸುಮಾರು ಮೂವರನ್ನು ಉಸಿರಾಟದ ತೊಂದರೆಯಿಂದ ಹಮಿಡಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಭೋಪಾಲ್ ಅನಿಲ ದುರಂತ ಪರಿಹಾರ ಮತ್ತು ಪುನರ್ವಸತಿ ಸಚಿವ ವಿಶ್ವಾಸ್ ಸಾರಂಗ್ ಮತ್ತು ಭೋಪಾಲ್ ಮೇಯರ್ ಮಾಲ್ತಿ ರೈ ಅವರು ಹಮಿಡಿಯಾ ಆಸ್ಪತ್ರೆಗೆ ಆಗಮಿಸಿ ಸಂತ್ರಸ್ತರ ಸ್ಥಿತಿಯನ್ನು ವಿಚಾರಿಸಿದರು.
ಮುಂಜಾಗ್ರತಾ ಕ್ರಮವಾಗಿ ಗುರುವಾರ (ಅಕ್ಟೋಬರ್ 27) ಪೀಡಿತ ಪ್ರದೇಶದಲ್ಲಿ ನೀರು ಸರಬರಾಜು ಮಾಡಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಗಂಧದ ಗುಡಿ’ ಬಗ್ಗೆ ಅಶ್ವಿನಿ ಪುನೀತ್ ರಾಜ್ಕುಮಾರ್ ಮೊದಲ ಬಾರಿಗೆ ಹೇಳಿದ್ದೇನು? ಇಲ್ಲಿದೆ ನೋಡಿ ಸಂದರ್ಶನದ ವಿಡಿಯೋ
‘AICC’ ಅಧ್ಯಕ್ಷರಾಗುತ್ತಿದ್ದಂತೆ ಎಲ್ಲರ ಹುಬ್ಬೇರುವಂತೆ ಮಹತ್ವದ ನಿರ್ಧಾರ ಕೈಗೊಂಡ ಖರ್ಗೆ |Mallikarjuna Kharge
‘ಗಂಧದ ಗುಡಿ’ ಬಗ್ಗೆ ಅಶ್ವಿನಿ ಪುನೀತ್ ರಾಜ್ಕುಮಾರ್ ಮೊದಲ ಬಾರಿಗೆ ಹೇಳಿದ್ದೇನು? ಇಲ್ಲಿದೆ ನೋಡಿ ಸಂದರ್ಶನದ ವಿಡಿಯೋ