ಬೆಂಗಳೂರು: ರಾಜ್ಯದಲ್ಲಿ ತಲ್ಲಣವನ್ನೇ ಸೃಷ್ಠಿಸಿದ್ದಂತ ಬಿಟ್ ಕಾಯಿನ್ ಪ್ರಕರಣದಲ್ಲಿ ಇಂದು ಮತ್ತೊಬ್ಬ ಇನ್ಸ್ ಸ್ಪೆಕ್ಟರ್ ಅನ್ನು ಬಂಧಿಸಲಾಗಿದೆ. ಈ ಮೂಲಕ ಬಿಟ್ ಕಾಯಿನ್ ಪ್ರಕರಣದ ತನಿಖೆಯನ್ನು ಸಿಐಡಿ SIT ಪೊಲೀಸರು ಚುರುಕುಗೊಳಿಸಿದ್ದಾರೆ.
ಬಿಟ್ ಕಾಯಿನ್ ಪ್ರಕರಣದಲ್ಲಿ ಈ ಹಿಂದೆ ಹಲವರನ್ನು ಬಂಧಿಸಲಾಗಿತ್ತು. ತನಿಖೆಯನ್ನು ಸಿಐಡಿಗೆ ವಹಿಸಿ ಸರ್ಕಾರ ಆದೇಶಿಸಿತ್ತು. ಈ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿರುವಂತ ಸಿಐಡಿ ಪೊಲೀಸರು, ಇಂದು ಪ್ರಕರಣದಲ್ಲಿ ಇನ್ಸ್ ಸ್ಪೆಕ್ಟರ್ ಲಕ್ಷ್ಮೀಕಾಂತಯ್ಯ ಅವರನ್ನು ಬಂಧಿಸಲಾಗಿದೆ.
ಬಂಧಿತ ಇನ್ಸ್ ಸ್ಪೆಕ್ಟರ್ ಲಕ್ಷ್ಮೀಕಾಂತಯ್ಯ ಅವರು ಈ ಹಿಂದೆ ಬಿಟ್ ಕಾಯಿನ್ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಅವರನ್ನು ಬಂಧಿಸಿರುವಂತ ಸಿಐಡಿ ಎಸ್ಐಟಿ ಪೊಲೀಸರು, ಕೆಲ ಹೊತ್ತಿನಲ್ಲೇ ಅವರನ್ನು ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಪಾಕಿಸ್ತಾನ ಪರ ಘೋಷಣೆ ಆರೋಪ : ತುಮಕೂರಲ್ಲಿ ‘ಬಿಜೆಪಿ ಕಾರ್ಯಕರ್ತರ’ ಪ್ರತಿಭಟನೆ ವೇಳೆ ‘Dysp’ ಮೇಲೆ ಹಲ್ಲೆ