ಶಿವಮೊಗ್ಗ : ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ ಸಿಪೆಟ್ ಸಂಸ್ಥೆಯು ದೇಶದ ಪಾಲಿಮರ್/ಪೆಟ್ರೋಕೆಮಿಕಲ್ಸ್/ ಪ್ಲಾಸ್ಟಿಕ್ಸ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದ್ದು, 2024-25ನೇ ಸಾಲಿನ ಡಿಪ್ಲೋಮಾ ಇನ್ ಪ್ಲಾಸ್ಟಿಕ್ ಟೆಕ್ನಾಲಿಜಿ, ಡಿಪ್ಲೋಮಾ ಇನ್ ಪ್ಲಾಸ್ಟಿಕ್ ಮೌಲ್ಡ್ ಟೆಕ್ನಾಲಿಜಿ 3 ವರ್ಷ ಕೋರ್ಸ್‍ಗಳ ಪ್ರವೇಶಕ್ಕೆ ಆನ್ ಲೈನ್ /ಆಫ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ತೇರ್ಗಡಿಯಾದವರು ವೆಬ್‍ಸೈಟ್ www.cipet.gov.in ರಲ್ಲಿ ಮೇ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸಿಪೆಟ್ ಸಂಸ್ಥೆಯ ನಿರ್ದೇಶಕ ಆರ್.ಟಿ. ನಾಗರಳ್ಳಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0821-2510618/9480253024/9791431827/ 9466585669 ಗಳನ್ನು ಸಂಪರ್ಕಿಸುವುದು.
BREAKING: ದೆಹಲಿ ಗಲಭೆ ಪ್ರಕರಣ: ‘ಉಮರ್ ಖಾಲಿದ್’ಗೆ ಜಾಮೀನು ನಿರಾಕರಿಸಿದ ಕೋರ್ಟ್ | Delhi Riots conspiracy case
BREAKING : ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದ ಪುಂಡರು : ಮೂವರ ಬಂಧನ