ಬೆಂಗಳೂರು: ದಿನಾಂಕ 02-10-2025ರಂದು ದಸರಾ ಉತ್ಸವ ಮತ್ತು ಮೆರವಣಿಗೆ ಪ್ರಯುಕ್ತ ಈ ಏರಿಯಾದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ.
ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ದಿನಾಂಕ: 02-10-2025 ರಂದು ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಉತ್ತರ, ಕೇಂದ್ರ, ಪೂರ್ವ ಮತ್ತು ಈಶಾನ್ಯ ವಿಭಾಗಳಲ್ಲಿ ನಡೆಯಲಿರುವ ದಸರಾ ಉತ್ಸವ ಮತ್ತು ಮೆರವಣಿಗೆ ಸಮಯದಲ್ಲಿ ಕೆಲವು ಕಿಡಿಗೇಡಿಗಳು ಮದ್ಯಪಾನದ ಅಮಲಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆ ಮಾಡಬಹುದಾದ ಸಾಧ್ಯತೆಗಳಿರುತ್ತವೆ. ಈ ನಿಟ್ಟಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಕೆಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿ, ಬಾರ್ & ರೆಸ್ಟೋರೆಂಟ್ ಮತ್ತು ವೈನ್ಸ್‌ಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸುವಂತೆ ಸಂಬಂಧಪಟ್ಟ ವಿಭಾಗಗಳ ಉಪ ಪೊಲೀಸ್ ಆಯುಕ್ತರುಗಳು ಉಲ್ಲೇಖಿತ ಪತ್ರಗಳಲ್ಲಿ ಪ್ರತ್ಯೇಕವಾಗಿ ಮನವಿಯನ್ನು ಸಲ್ಲಿಸಿರುತ್ತಾರೆ ಎಂದಿದ್ದಾರೆ.
ಮೇಲ್ಕಂಡ ವಿಷಯದ ಬಗ್ಗೆ ನಾನು ಸ್ವತಃ ಪರಿಶೀಲಿಸಲಾಗಿ ಹಾಗೂ ಗುಪ್ತವಾರ್ತಾ ವಿಭಾಗದಿಂದ ಸಂಗ್ರಹಿಸಿದ ಮಾಹಿತಿಯಿಂದ ಸಾಕಷ್ಟು ಸತ್ಯಾಂಶವಿದೆ ಎಂದು ತಿಳಿದುಬಂದಿರುತ್ತದೆ. ದಸರಾ ಉತ್ಸವ ಮತ್ತು ಮೆರವಣಿಗೆಯ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗವುಂಟಾಗದಂತೆ ಅಹಿತಕರ ಘಟನೆಗಳನ್ನು ತಡೆಯುವ ಅವಶ್ಯಕತೆ ಇರುವುದರಿಂದ ಈ ಕೆಳಕಂಡ ವಿಭಾಗಗಳ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಅವುಗಳ ಮುಂದೆ ನಮೂದಿಸಲಾದ ದಿನಾಂಕಗಳು ಮತ್ತು ಸಮಯದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸುವುದು ಸೂಕ್ತವೆಂದು ಮನಗೊಂಡಿರುತ್ತೇನೆ. ಆದ್ದರಿಂದ ಈ ಆದೇಶಿಸಿದ್ದಾರೆ.
ಈ ದಿಸೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ.163 ರ ಉಪ ಕಲಂ (1) ಮತ್ತು (3) ರ ಅನ್ವಯ ಪ್ರದತ್ತವಾದ ಅಧಿಕಾರಿವನ್ನು ಚಲಾಯಿಸಿ ಸೀಮಾಂತ್ ಕುಮಾರ್ ಸಿಂಗ್, ಭಾ.ಹೊ.ಸೇ. ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಆದ ನಾನು ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಈ ಕೆಳಕಂಡ ವಿಭಾಗಗಳ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಅವುಗಳ ಮುಂದೆ ನಮೂದಿಸಲಾದ ದಿನಾಂಕಗಳು ಮತ್ತು ಸಮಯದಲ್ಲಿ CL-4 & CL-6A ಪರವಾನಗಿಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಬಾರ್ & ರೆಸ್ಟೋರೆಂಟ್‌ಗಳು, ವೈನ್ಸ್ ಷಾಪ್‌ಗಳು, ಪಬ್‌ಗಳು, ಎಂ.ಎಸ್.ಐ.ಎಲ್. ಮಳಿಗೆಗಳು ಸೇರಿದಂತೆ ಎಲ್ಲಾ ರೀತಿಯ ಮದ್ಯ ಮಾರಾಟವನ್ನು ಮಾಡುವ ಅಂಗಡಿಗಳನ್ನು ಮುಚ್ಚಲು ಹಾಗೂ ಮಾರಾಟವನ್ನು ಮಾಡದಿರಲು ನಿಷೇಧಾಜ್ಞೆಯನ್ನು ವಿಧಿಸಿರುತ್ತೇನೆ. ಇದು ರೆಸ್ಟೋರೆಂಟ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸೇವೆಗಳಿಗೆ ಮಾತ್ರ ವಿನಾಯಿತಿ ನೀಡಲಾಗಿರುತ್ತದೆ ಎಂದು ಹೇಳಿದ್ದಾರೆ.
ಅಕ್ಟೋಬರ್.2ರಂದು ಈ ಏರಿಯಾಗಳಲ್ಲಿ ಮದ್ಯ ಮಾರಾಟ ಬಂದ್
- ಬೆಂಗಳೂರಿನ ಉತ್ತರ ವಿಭಾಗದ ಆರ್ ಟಿ ನಗರ, ಜೆಸಿ ನಗರ, ಹೆಬ್ಬಾಳ ಮತ್ತು ಸಂಜಯ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
- ಈಶಾನ್ಯ ವಿಭಾಗದ ಕೋಡಿಗೇಹಳ್ಳಿ ಮತ್ತು ಅಮೃತಹಳ್ಳಿಯಲ್ಲಿ ಮದ್ಯ ನಿಷೇಧಿಸಲಾಗಿದೆ.
- ಪೂರ್ವ ವಿಭಾಗದ ಭಾರತಿನಗರ, ಪುಲಕೇಶಿನಗರ, ಡಿಜೆ ಹಳ್ಳಿ, ಕೆಜಿ ಹಳ್ಳಿ ಮತ್ತು ಶಿವಾಜಿನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧವಿದೆ.
- ಕೇಂದ್ರ ವಿಭಾಗದ ಹೌಗ್ರೌಂಡ್ ಮತ್ತು ಸದಾಶಿವನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ದಿನಾಂಕ 03-10-2025ರಂದು ಮಧ್ಯರಾತ್ರಿ ಬೆಳಗ್ಗೆ 12 ಗಂಟೆಯಿಂದ ದಿನಾಂಕ 03-10-2025ರ ಮಧ್ಯಾಹ್ನ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಹಾರ್ದಿಕ್ ಪಾಂಡ್ಯ ಔಟ್: ವರದಿ | Hardik pandya