Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ವಿವಾಹಪೂರ್ವ ದೈಹಿಕ ಸಂಬಂಧವಿದ್ದರೆ ಅದು ಚಾರಿತ್ರ್ಯದ ಮೇಲೆ ಕಪ್ಪುಚುಕ್ಕೆಯಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

​ಮುಂಬೈ ಇಂಡಿಯನ್ಸ್‌ಗೆ ಗುಡ್ ಬೈ ಹೇಳಲಿದ್ದಾರಾ ಸೂರ್ಯಕುಮಾರ್ ಯಾದವ್? ಇನ್‌ಸ್ಟಾಗ್ರಾಮ್‌ನಿಂದ ಅನ್ ಫಾಲೋ ಮಾಡಿದ ಸ್ಟಾರ್ ಬ್ಯಾಟರ್!

​ಪರೀಕ್ಷಾ ಅಕ್ರಮಗಳ ವಿರುದ್ಧ ‘ಕಾಕ್ರೋಚ್ ಜನತಾ ಪಾರ್ಟಿ’ ಕಹಳೆ: ಜೂನ್ 11ರಂದು ಪುಣೆಯಲ್ಲಿ ಬೃಹತ್ ಪ್ರತಿಭಟನೆ, ಪ್ರಧಾನ್ ರಾಜೀನಾಮೆಗೆ ಆಗ್ರಹ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಅ.2ರಂದು ಬೆಂಗಳೂರಿನ ಈ ಏರಿಯಾದಲ್ಲಿ ‘ಮದ್ಯ ಮಾರಾಟ’ ನಿಷೇಧಿಸಿ ನಗರ ಪೊಲೀಸ್ ಆಯುಕ್ತರ ಆದೇಶ
KARNATAKA

BREAKING: ಅ.2ರಂದು ಬೆಂಗಳೂರಿನ ಈ ಏರಿಯಾದಲ್ಲಿ ‘ಮದ್ಯ ಮಾರಾಟ’ ನಿಷೇಧಿಸಿ ನಗರ ಪೊಲೀಸ್ ಆಯುಕ್ತರ ಆದೇಶ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ದಿನಾಂಕ 02-10-2025ರಂದು ದಸರಾ ಉತ್ಸವ ಮತ್ತು ಮೆರವಣಿಗೆ ಪ್ರಯುಕ್ತ ಈ ಏರಿಯಾದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ.

ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ದಿನಾಂಕ: 02-10-2025 ರಂದು ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಉತ್ತರ, ಕೇಂದ್ರ, ಪೂರ್ವ ಮತ್ತು ಈಶಾನ್ಯ ವಿಭಾಗಳಲ್ಲಿ ನಡೆಯಲಿರುವ ದಸರಾ ಉತ್ಸವ ಮತ್ತು ಮೆರವಣಿಗೆ ಸಮಯದಲ್ಲಿ ಕೆಲವು ಕಿಡಿಗೇಡಿಗಳು ಮದ್ಯಪಾನದ ಅಮಲಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆ ಮಾಡಬಹುದಾದ ಸಾಧ್ಯತೆಗಳಿರುತ್ತವೆ. ಈ ನಿಟ್ಟಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಕೆಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿ, ಬಾರ್ & ರೆಸ್ಟೋರೆಂಟ್ ಮತ್ತು ವೈನ್ಸ್‌ಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸುವಂತೆ ಸಂಬಂಧಪಟ್ಟ ವಿಭಾಗಗಳ ಉಪ ಪೊಲೀಸ್ ಆಯುಕ್ತರುಗಳು ಉಲ್ಲೇಖಿತ ಪತ್ರಗಳಲ್ಲಿ ಪ್ರತ್ಯೇಕವಾಗಿ ಮನವಿಯನ್ನು ಸಲ್ಲಿಸಿರುತ್ತಾರೆ ಎಂದಿದ್ದಾರೆ.

ಮೇಲ್ಕಂಡ ವಿಷಯದ ಬಗ್ಗೆ ನಾನು ಸ್ವತಃ ಪರಿಶೀಲಿಸಲಾಗಿ ಹಾಗೂ ಗುಪ್ತವಾರ್ತಾ ವಿಭಾಗದಿಂದ ಸಂಗ್ರಹಿಸಿದ ಮಾಹಿತಿಯಿಂದ ಸಾಕಷ್ಟು ಸತ್ಯಾಂಶವಿದೆ ಎಂದು ತಿಳಿದುಬಂದಿರುತ್ತದೆ. ದಸರಾ ಉತ್ಸವ ಮತ್ತು ಮೆರವಣಿಗೆಯ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗವುಂಟಾಗದಂತೆ ಅಹಿತಕರ ಘಟನೆಗಳನ್ನು ತಡೆಯುವ ಅವಶ್ಯಕತೆ ಇರುವುದರಿಂದ ಈ ಕೆಳಕಂಡ ವಿಭಾಗಗಳ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಅವುಗಳ ಮುಂದೆ ನಮೂದಿಸಲಾದ ದಿನಾಂಕಗಳು ಮತ್ತು ಸಮಯದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸುವುದು ಸೂಕ್ತವೆಂದು ಮನಗೊಂಡಿರುತ್ತೇನೆ. ಆದ್ದರಿಂದ ಈ ಆದೇಶಿಸಿದ್ದಾರೆ.

ಈ ದಿಸೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ.163 ರ ಉಪ ಕಲಂ (1) ಮತ್ತು (3) ರ ಅನ್ವಯ ಪ್ರದತ್ತವಾದ ಅಧಿಕಾರಿವನ್ನು ಚಲಾಯಿಸಿ ಸೀಮಾಂತ್ ಕುಮಾರ್ ಸಿಂಗ್, ಭಾ.ಹೊ.ಸೇ. ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಆದ ನಾನು ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಈ ಕೆಳಕಂಡ ವಿಭಾಗಗಳ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಅವುಗಳ ಮುಂದೆ ನಮೂದಿಸಲಾದ ದಿನಾಂಕಗಳು ಮತ್ತು ಸಮಯದಲ್ಲಿ CL-4 & CL-6A ಪರವಾನಗಿಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಬಾರ್ & ರೆಸ್ಟೋರೆಂಟ್‌ಗಳು, ವೈನ್ಸ್ ಷಾಪ್‌ಗಳು, ಪಬ್‌ಗಳು, ಎಂ.ಎಸ್.ಐ.ಎಲ್. ಮಳಿಗೆಗಳು ಸೇರಿದಂತೆ ಎಲ್ಲಾ ರೀತಿಯ ಮದ್ಯ ಮಾರಾಟವನ್ನು ಮಾಡುವ ಅಂಗಡಿಗಳನ್ನು ಮುಚ್ಚಲು ಹಾಗೂ ಮಾರಾಟವನ್ನು ಮಾಡದಿರಲು ನಿಷೇಧಾಜ್ಞೆಯನ್ನು ವಿಧಿಸಿರುತ್ತೇನೆ. ಇದು ರೆಸ್ಟೋರೆಂಟ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸೇವೆಗಳಿಗೆ ಮಾತ್ರ ವಿನಾಯಿತಿ ನೀಡಲಾಗಿರುತ್ತದೆ ಎಂದು ಹೇಳಿದ್ದಾರೆ.

ಅಕ್ಟೋಬರ್.2ರಂದು ಈ ಏರಿಯಾಗಳಲ್ಲಿ ಮದ್ಯ ಮಾರಾಟ ಬಂದ್

  • ಬೆಂಗಳೂರಿನ ಉತ್ತರ ವಿಭಾಗದ ಆರ್ ಟಿ ನಗರ, ಜೆಸಿ ನಗರ, ಹೆಬ್ಬಾಳ ಮತ್ತು ಸಂಜಯ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
  • ಈಶಾನ್ಯ ವಿಭಾಗದ ಕೋಡಿಗೇಹಳ್ಳಿ ಮತ್ತು ಅಮೃತಹಳ್ಳಿಯಲ್ಲಿ ಮದ್ಯ ನಿಷೇಧಿಸಲಾಗಿದೆ.
  • ಪೂರ್ವ ವಿಭಾಗದ ಭಾರತಿನಗರ, ಪುಲಕೇಶಿನಗರ, ಡಿಜೆ ಹಳ್ಳಿ, ಕೆಜಿ ಹಳ್ಳಿ ಮತ್ತು ಶಿವಾಜಿನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧವಿದೆ.
  • ಕೇಂದ್ರ ವಿಭಾಗದ ಹೌಗ್ರೌಂಡ್ ಮತ್ತು ಸದಾಶಿವನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ದಿನಾಂಕ 03-10-2025ರಂದು ಮಧ್ಯರಾತ್ರಿ ಬೆಳಗ್ಗೆ 12 ಗಂಟೆಯಿಂದ ದಿನಾಂಕ 03-10-2025ರ ಮಧ್ಯಾಹ್ನ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಹಾರ್ದಿಕ್ ಪಾಂಡ್ಯ ಔಟ್: ವರದಿ | Hardik pandya

BREAKING: ರಾಜ್ಯ ಸರ್ಕಾರದಿಂದ ‘ಅತಿಥಿ ಉಪನ್ಯಾಸಕ’ರನ್ನು ತಾತ್ಕಾಲಿಕವಾಗಿ ಆಯ್ಕೆಗೆ ಗ್ರೀನ್ ಸಿಗ್ನಲ್: ಈ ಕಂಡೀಷನ್ ಅಪ್ಲೈ

Share. Facebook Twitter LinkedIn WhatsApp Email

Related Posts

ಮಾಜಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧ ಮುಡಾ ಕೇಸ್ : ವಿಚಾರಣೆ ಜುಲೈ 3ಕ್ಕೆ ಮುಂದೂಡಿದ ಹೈಕೋರ್ಟ್

1 Min Read

GOOD NEWS : ಆಯುಷ್ಮಾನ್ ಯೋಜನೆಯಡಿ APL ಕುಟುಂಬಗಳಿಗೆ ಹೆಚ್ಚಿನ ನೆರವು ನೀಡಲು ಚಿಂತನೆ : ಸಚಿವ ಯು.ಟಿ‌ ಖಾದರ್

2 Mins Read

ಬೆಂಗಳೂರಲ್ಲಿ 5 ಸಾವಿರ ಲಂಚಕ್ಕೆ ಬೇಡಿಕೆ : ಕಾನೂನು ಮಾಪನಶಾಸ್ತ್ರದ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ!

1 Min Read
Recent News

​ವಿವಾಹಪೂರ್ವ ದೈಹಿಕ ಸಂಬಂಧವಿದ್ದರೆ ಅದು ಚಾರಿತ್ರ್ಯದ ಮೇಲೆ ಕಪ್ಪುಚುಕ್ಕೆಯಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

​ಮುಂಬೈ ಇಂಡಿಯನ್ಸ್‌ಗೆ ಗುಡ್ ಬೈ ಹೇಳಲಿದ್ದಾರಾ ಸೂರ್ಯಕುಮಾರ್ ಯಾದವ್? ಇನ್‌ಸ್ಟಾಗ್ರಾಮ್‌ನಿಂದ ಅನ್ ಫಾಲೋ ಮಾಡಿದ ಸ್ಟಾರ್ ಬ್ಯಾಟರ್!

​ಪರೀಕ್ಷಾ ಅಕ್ರಮಗಳ ವಿರುದ್ಧ ‘ಕಾಕ್ರೋಚ್ ಜನತಾ ಪಾರ್ಟಿ’ ಕಹಳೆ: ಜೂನ್ 11ರಂದು ಪುಣೆಯಲ್ಲಿ ಬೃಹತ್ ಪ್ರತಿಭಟನೆ, ಪ್ರಧಾನ್ ರಾಜೀನಾಮೆಗೆ ಆಗ್ರಹ

​ಹಣ ಉಳಿತಾಯಕ್ಕೆ ಇಲ್ಲಿದೆ ಸರಳ ದಾರಿ: ನಿಮ್ಮ ಜೀವನಶೈಲಿಯಲ್ಲಿ ಸಣ್ಣ ಬದಲಾವಣೆ ಮಾಡಿ ಆರ್ಥಿಕ ಭದ್ರತೆ ಪಡೆಯಿರಿ!

State News
KARNATAKA

ಮಾಜಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧ ಮುಡಾ ಕೇಸ್ : ವಿಚಾರಣೆ ಜುಲೈ 3ಕ್ಕೆ ಮುಂದೂಡಿದ ಹೈಕೋರ್ಟ್

By ಸುರೇಶ್‌ KARNATAKA 1 Min Read

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ मुख्यमंत्री ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರ…

GOOD NEWS : ಆಯುಷ್ಮಾನ್ ಯೋಜನೆಯಡಿ APL ಕುಟುಂಬಗಳಿಗೆ ಹೆಚ್ಚಿನ ನೆರವು ನೀಡಲು ಚಿಂತನೆ : ಸಚಿವ ಯು.ಟಿ‌ ಖಾದರ್

ಬೆಂಗಳೂರಲ್ಲಿ 5 ಸಾವಿರ ಲಂಚಕ್ಕೆ ಬೇಡಿಕೆ : ಕಾನೂನು ಮಾಪನಶಾಸ್ತ್ರದ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ!

BREAKING : ಶಿವಮೊಗ್ಗದಲ್ಲಿ ಶಾಸಕ ಬಿಕೆ ಸಂಗಮೇಶ ಪುತ್ರನ ಆಪ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ಬೆಚ್ಚಿ ಬಿದ್ದ ಜನತೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.