ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾನುವಾರ ರಾತ್ರಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ವಾಹನವನ್ನು ಗುರಿಯಾಗಿಸಿಕೊಂಡು ನಡೆದ ಗ್ರೆನೇಡ್ ದಾಳಿಯಲ್ಲಿ ಬಾಲಕನೋರ್ವ ಗಾಯಗೊಂಡಿದ್ದಾನೆ.
ಶ್ರೀನಗರದ ಎಂ.ಕೆ.ಚೌಕ್ನ ಜನನಿಬಿಡ ಪ್ರದೇಶದಲ್ಲಿ ಸಿಆರ್ಪಿಎಫ್ ವಾಹನದ ಮೇಲೆ ಗ್ರೆನೇಡ್ ಎಸೆಯುವ ಯತ್ನ ನಡೆದಿದೆ. ಅದು ಗುರಿ ತಪ್ಪಿ ಸ್ಥಳೀಯ ಬಾಲಕನೊಬ್ಬನಿಗೆ ಸಣ್ಣಪುಟ್ಟ ಗಾಯ ಉಂಟು ಮಾಡಿದೆ. ಅಪರಾಧಿಯನ್ನು ಹಿಡಿಯಲು ಆ ಪ್ರದೇಶದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಶ್ರೀನಗರ ಪೊಲೀಸರು ತಿಳಿಸಿದ್ದಾರೆ.
ಭಾನುವಾರ (ನಿನ್ನೆ) ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಹಳ್ಳಿಯಲ್ಲಿ ನಡೆದ ಶಂಕಿತ ಭಯೋತ್ಪಾದಕ ದಾಳಿಯಲ್ಲಿ ನಾಲ್ವರು ನಾಗರಿಕರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ರಾಜೌರಿ ಪಟ್ಟಣದಿಂದ ಸುಮಾರು ಎಂಟು ಕಿಲೋಮೀಟರ್ ದೂರದಲ್ಲಿರುವ ಡ್ಯಾಂಗ್ರಿ ಗ್ರಾಮದಲ್ಲಿ ನಾಗರಿಕರ ಮೇಲೆ ದಾಳಿ ನಡೆದಿದೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ತಿಳಿಸಿದ್ದಾರೆ.
ಇಬ್ಬರು ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದು, ಗಾಯಗೊಂಡವರನ್ನು ಕೂಡಲೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
BREAKING NEWS : `ನೋಟು ಅಮಾನ್ಯೀಕರಣ’ ಸಿಂಧುತ್ವ ತೀರ್ಪು ಎತ್ತಿ ಹಿಡಿದ ಸುಪ್ರೀಂಕೋರ್ಟ್
BIGG NEWS: ಸಿದ್ದೇಶ್ವರ ಶ್ರೀಗಳಿಗೆ ಮುಂದುವರೆದ ಚಿಕಿತ್ಸೆ; ಜ್ಞಾನಯೋಗಾಶ್ರಮಕ್ಕೆ ಭಕ್ತರ ದಂಡು, ಅನ್ನದಾಸೋಹ ವ್ಯವಸ್ಥೆ