ತುಮಕೂರು: ಸ್ನೇಹಿತರೊಂದಿಗೆ ಕ್ಷುಲ್ಲಕ ಕಾರಣಕ್ಕಾಗಿ ಜಗಳ ಆಡಿಕೊಂಡು 7ನೇ ತರಗತಿ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ತುಮಕೂರಲ್ಲಿ ನಡೆದಿದೆ.
ತುಮಕೂರಿನ ವಿಜಯನಗರದ 2ನೇ ಮುಖ್ಯ ರಸ್ತೆಯಲ್ಲಿರುವಂತ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಎಂಬುವರ ಪುತ್ರ ತ್ರಿಶಾಲ್(13) ಎಂಬುವರೇ ಆತ್ಮಹತ್ಯೆಗೆ ಶರಣಾದಂತ ವಿದ್ಯಾರ್ಥಿಯಾಗಿದ್ದಾನೆ.
ತ್ರಿಶಾಲ್ ಅವರು ವಿಶಾಲ್ ಸರ್ವೋದಯ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ತಾಯಿ ಶಕುಂತಲಾ ಜೊತೆಗೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇಂದು ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ತ್ರಿಶಾಲ್ ನೇಣಿಗೆ ಶರಣಾಗಿದ್ದಾನೆ.
ಸಾವಿಗೂ ಮುನ್ನ ಡೆತ್ ನೋಟ್ ಬರೆದಿದ್ದು, ಪಾರಿವಾಳ ಬೆಟ್ಟಿಂಗ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿತ್ತು. ಅದೇ ವಿಚಾರಕ್ಕೆ ತಾನು ಮನನೊಂದು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ತಿಳಿಸಿದ್ದಾನೆ. ಘಟನಾ ಸ್ಥಳಕ್ಕೆ ಜಯನಗರ ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Electricity Bill: 2 ಬಿಲಿಯನ್ ರೂಪಾಯಿ ವಿದ್ಯುತ್ ಬಿಲ್ ಕಂಡು ಆಘಾತಕ್ಕೊಳಗಾದ ವ್ಯಕ್ತಿ!