ಬೆಂಗಳೂರು: ಹಾಸ್ಟೆಲ್‌ನಲ್ಲಿ ಓದುತ್ತಲೇ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಬಾಗೇಪಲ್ಲಿ ಆಸ್ಪತ್ರೆಯಲ್ಲಿ ಬಾಗೇಪಲ್ಲಿ ಆಸ್ಪತ್ರೆಯಲ್ಲಿ ನಡೆದಿದೆ.
ತುಮಕೂರಿನ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬಳು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ ಎನ್ನಲಾಗಿದೆ. ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಬಾಗೇಪಲ್ಲಿ ಠಾಣೆಯ ಪೊಲೀಸರು ಪೋಕ್ಸೋ ಕೇಸ್ ದಾಖಲು ಮಾಡಿಕೊಂಡು ಪ್ರಕರಣವನ್ನು ಬಾಗೇಪಲ್ಲಿ ಪೊಲೀಸ್ ಠಾಣೆಯಿಂದ ತುಮಕೂರು ನಗರ ಪೊಲೀಸ್ ಠಾಣೆಗೆ ಪೋಕ್ಸೋ ಪ್ರಕರಣವನ್ನು ವರ್ಗಾವಣೆ ಮಾಡಲಾಗಿದೆ. ಸದ್ಯ ತುಮಕೂರಿನ ನಗರ ಪೊಲೀಸ್ ಠಾಣೆಯವರು ಬಾಲಕಿಯ ಮೇಲೆ ಅತ್ಯಾಚಾರ ಮಾಡಿರುವ ವ್ಯಕ್ತಿಗಾಗಿ ಬೆನ್ನಟ್ಟಿದ್ದಾರೆ.