ನವದೆಹಲಿ:ಸರ್ಕಾರದ ವಾರ್ಷಿಕ ಸ್ವಚ್ಛತಾ ಸಮೀಕ್ಷೆಯಲ್ಲಿ ಇಂದೋರ್ ಸತತ ಎಂಟನೇ ಬಾರಿಗೆ ‘ಸ್ವಚ್ಛ ನಗರ’ ಸ್ಥಾನವನ್ನು ಉಳಿಸಿಕೊಂಡಿದೆ. ಸೂರತ್ ಮತ್ತು ನವೀ ಮುಂಬೈ ನಂತರದ ಸ್ಥಾನಗಳಲ್ಲಿವೆ.
ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ‘ಸ್ವಚ್ಛ ಸರ್ವೇಕ್ಷಣ್’ ಫಲಿತಾಂಶಗಳನ್ನು ಗುರುವಾರ ಪ್ರಕಟಿಸಲಾಗಿದೆ.3-10 ಲಕ್ಷ ಜನಸಂಖ್ಯೆಯ ವಿಭಾಗದಲ್ಲಿ ನೋಯ್ಡಾ ಸ್ವಚ್ಛ ನಗರವಾಗಿ ಹೊರಹೊಮ್ಮಿದೆ, ನಂತರ ಚಂಡೀಗಢ ಮತ್ತು ಮೈಸೂರು ಸ್ಥಾನ ಪಡೆದಿದೆ.
ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಿದರು.