ಬೆಂಗಳೂರು: ರಾಜ್ಯದ ವಿವಿಧ ವಿಷಯಗಳ ಕುರಿತಂತೆ ಚರ್ಚಿಸೋ ಕಾರಣದಿಂದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅಕ್ಟೋಬರ್ 7ರಂದು ಮಹತ್ವದ ಸರ್ವಪಕ್ಷಗಳ ಸಭೆಯನ್ನು ಕರೆದಿದ್ದಾರೆ.
ಈಗಾಗಲೇ ರಾಜ್ಯದ ಸಮಸ್ಯೆ ಕುರಿತಂತೆ ಚರ್ಚಿಸೋ ಸಂಬಂಧ ಸರ್ವಪಕ್ಷಗಳ ಸಭೆಯನ್ನು ಕರೆಯುವುದಾಗಿ ಸಿಎಂ ಬೊಮ್ಮಾಯಿಯವರು ಅಧಿವೇಶನದ ಸಂದರ್ಭದಲ್ಲಿ ವಿಪಕ್ಷಗಳ ನಾಯಕರಿಗೆ ಭರವಸೆಯನ್ನು ನೀಡಿದ್ದರು.
BIGG NEWS: ಮನಾಲಿಯಲ್ಲಿ ಜಾನಪದ ಕಲಾವಿದರೊಂದಿಗೆ ನೃತ್ಯ ಮಾಡಿದ ʼಹಿಮಾಚಲ ಪ್ರದೇಶ ಸಿಎಂ ಜೈರಾಮ್ ಠಾಕೂರ್ ʼ| Watch
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಾವು ನೀಡಿದಂತ ಭರವಸೆಯಂತೆ ಅಕ್ಟೋಬರ್ 7ರಂದು ಸರ್ವಪಕ್ಷಗಳ ಸಭೆಯನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಕರೆದಿದ್ದಾರೆ. ಈ ಸಭೆಯಲ್ಲಿ ವಿಧಾನಸಭೆಯ ವಿಪಕ್ಷ ನಾಯಕರು, ಕಾಂಗ್ರೆಸ್, ಜೆಡಿಎಸ್ ನಾಯಕರು, ಪರಿಷತ್ ವಿಪಕ್ಷ ನಾಯಕರು ಭಾಗವಹಿಸಲಿದ್ದಾರೆ.
ನಿಮ್ಮ ‘ಹೈಪರ್ ಅಸಿಡಿಟಿ’ಗೆ ಈ ‘ಮನೆಮದ್ದು’ ಮಾಡಿ, ರೋಗ ಮಾಯ | Hyperacidity
ಸಿಎಂ ಬೊಮ್ಮಾಯಿಯವರು ಕರೆದಿರುವಂತ ಸರ್ವಪಕ್ಷಗಳ ಸಭೆಯಲ್ಲಿ ಎಸ್ಸಿ, ಎಸ್ಟಿ ಮೀಸಲಾತಿ ಸಂಬಂಧ ನ್ಯಾಯಮೂರ್ತಿ ಮೋಹನ್ ದಾಸ್ ಸಮಿತಿ ಸಲ್ಲಿಸಿದ್ದಂತ ವರದಿಯ ಬಗ್ಗೆಯೂ ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ. ಆ ಬಗ್ಗೆ ಅಕ್ಟೋಬರ್ 7ರವರೆಗೆ ಕಾದು ನೋಡಬೇಕಿದೆ.