ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಸಂಘದ ಮನವಿ ಮೇರೆಗೆ ಹಿರಿಯ ಪತ್ರಕರ್ತ ರಾಮಣ್ಣ ಎಚ್.ಕೋಡಿಹೊಸಳ್ಲಿ ಅವರ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 1.35 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.
ಮುಂಗಾರು, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಮಾಧ್ಯಮಗಳಲ್ಲಿ ಕೆಲಸ ಮಾಡಿರುವ ರಾಮಣ್ಣ ಕೋಡಿಹೊಸಳ್ಳಿ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು.
ಶಸ್ತ್ರಚಿಕಿತ್ಸೆಗಾಗಿ ಸುಮಾರು ಮೂರು ಲಕ್ಷ ಕ್ಕೂ ಹೆಚ್ಚು ವೆಚ್ಚ ಮಾಡಿಕೊಂಡು ಸಂಕಷ್ಟದಲ್ಲಿರುವ ಬಗ್ಗೆ ನಾಗರಾಜಸ್ವಾಮಿ ಸೇರಿದಂತೆ ಕೆಲ ಪತ್ರಕರ್ತ ಗೆಳೆಯರು ಕೆಯುಡಬ್ಲ್ಯೂಜೆ ಗಮನಕ್ಕೆ ತಂದಿದ್ದರು.
ಹಿರಿಯ ಪತ್ರಕರ್ತರಾದ ರಾಮಣ್ಣ ಕೋಡಿಹೊಸಳ್ಳಿ ಅವರ ಚಿಕಿತ್ಸೆಗೆ ನೆರವಾಗುವಂತೆ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಮನವಿ ಮೇರೆಗೆ ಚಿಕಿತ್ಸೆಗಾಗಿ 1.35 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಮಂಜೂರು ಮಾಡಿದ್ದಾರೆ.
ಹಿರಿಯ ಪತ್ರಕರ್ತರಾದ ರಾಮಣ್ಣ ಅವರ ಚಿಕಿತ್ಸೆಗಾಗಿ ಮಾನವೀಯ ದೃಷ್ಟಿಯಿಂದ ಪರಿಹಾರ ಮಂಜೂರು ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಕೃತಜ್ಞತೆಗಳನ್ನು ಸಲ್ಲಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಬಿಗ್ ಶಾಕ್: ಮಂಡ್ಯದ ಮಳವಳ್ಳಿಯಲ್ಲಿ 75ಕ್ಕೂ ಹೆಚ್ಚು ಮಂದಿ ಜೆಡಿಎಸ್ ಸೇರ್ಪಡೆ
BIGG NEWS: ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಹಕ್ಕಿಜ್ವರ ಹಿನ್ನೆಲೆ; ಚಾಮರಾಜನಗರದಲ್ಲಿ ಕಟ್ಟೆಚ್ಚರ
BREAKING NEWS: ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಂದಿದ್ದ ಮಂಡ್ಯಯ ಶಿಕ್ಷಕ ಹೃದಯಾಘಾತದಿಂದ ಸಾವು