ಬೆಂಗಳೂರು: ಇಂದು ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ, ಧಾರವಾಡಗಳತ್ತ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಶಿಗ್ಗಾವಿ, ಸವಣೂರಿನಲ್ಲಿ ವಕೀಲರ ಸಂಘಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಸಿಎಂ ಮಾಡಲಿದ್ದಾರೆ.
BIGG NEWS: ವಿಜಯಪುರದಲ್ಲಿ ಕೆಲವೆಡೆ ಭೂಕಂಪ; ಆತಂಕದಲ್ಲಿ ಜನರು
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಶಿಗ್ಗಾಂವ ತೆರಳಲಿರುವ ಸಿಎಂ ಬೊಮ್ಮಾಯಿ ಅವರು, ಶಿಗ್ಗಾಂವಿ ಮತ್ತು ಸವಣೂರಿನಲ್ಲಿ ವಕೀಲರ ಸಂಘಗಳ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಹಾವೇರಿ ನ್ಯಾಯಾಲಯದ ಆವರಣದಲ್ಲಿ ನಿರ್ಮಾಣವಾಗಿರುವ ವಕೀಲರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಲಿದ್ದಾರೆ.
ಬಳಿಕ ಸಂಜೆ 5-30ಕ್ಕೆ ಹಾವೇರಿಯ ಪ್ರವಾಸಿ ಮಂದಿರದ ಬಳಿ ನಿರ್ಮಿಸಲಾಗಿರುವ ಸಂಚಾರಿ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದಾರೆ.
ಈ ಎಲ್ಲ ಕಾರ್ಯಕ್ರಮಗಳ ನಂತರ ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಅವರು, ಹಾವೇರಿಯಿಂದ ರಸ್ತೆ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದ ಮೂಲಕ ಮರಳಲಿದ್ದಾರೆ.