ಬೆಳಗಾವಿ : ಮಹದಾಯಿ ಹೋರಾಟಗಾರರ ಬಾಕಿಯಿರುವ ಪ್ರಕರಣ ಹಿಂಪಡೆಯಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಕರ್ನಾಟಕದ ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಹೌದು, ಕೇಂದ್ರ ಜಲ ಆಯೋಗವು ಕರ್ನಾಟಕದ ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಅನುಮತಿ ನೀಡಿದೆ. ಈ ಕುರಿತು ಮಾತನಾಡಿರುವ ಸಿಎಂ ಬೊಮ್ಮಾಯಿ ಬಾಕಿ ಇರುವ ಮಹದಾಯಿ ಹೋರಾಟಗಾರರ ಪ್ರಕರಣ ಹಿಂಪಡೆಯುವುದಾಗಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಉತ್ತರ ಕರ್ನಾಟಕ ಭಾಗದ ಜನರಿಗೆ ಪ್ರಧಾನಿ ನರೇಂದ್ರ ಮೋದಿಯವರ ಕೊಡುಗೆ ಇದಾಗಿದೆ ಎಂದರು. ಬಹಳ ವರ್ಷದ ಕನಸು ನನಸಾಗಿದೆ. ಇಡೀ ಕರ್ನಾಟಕ ಭಾಗದ ಜನತೆ ಹಾಗೂ ಎಲ್ಲಾ ಸದಸ್ಯರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು, ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ನೀರಾವರಿ ಸಚಿವ ಗೋವಿಂದ್ ಕಾರಜೋಳ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ. ಕಳಸಾ ಭಂಡೂರಿ ಯೋಜನೆಯ ಅನುಮೋದನೆಗಾಗಿ ರಚನಾತ್ಮಕ ಯೋಜನಾ ವರದಿಯನ್ನು ನಿರೂಪಿಸಿದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ , ನಿಕಟಪೂರ್ವ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ನವರಿಗೆ ಹಾಗೂ ರಾಜ್ಯದ ನೀರಾವರಿ ಸಚಿವರಾದ ಗೋವಿಂದ ಕಾರಜೋಳ ಅವರಿಗೂ ಅನಂತ ಧನ್ಯವಾದಗಳು ಎಂದು ಹೇಳಿದ್ದಾರೆ. ಇನ್ನೂ, ಜನವರಿ 2 ರಂದು ಕಾಂಗ್ರೆಸ್ ಮಹದಾಯಿ ವಿಚಾರವಾಗಿ ಬೃಹತ್ ಸಮಾವೇಶ ನಡೆಸಲು ಸಿದ್ದತೆ ನಡೆಸಿತ್ತು, ಕಾಂಗ್ರೆಸ್ ಸಮಾವೇಶಕ್ಕೂ ಮುನ್ನವೇ ಯೋಜನೆ ವರದಿಗೆ ಅನುಮೋದನೆ ಸಿಕ್ಕಿದೆ.ಕಳಸಾ ಬಂಡೂರಿ ಯೋಜನೆಗೆ ಈ ಹಿಂದೆ ನಾವು ಕೂಡಾ ಹೋರಾಟ ಮಾಡಿದ್ದೆವು, . ಇದೀಗ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಜೋಶಿ ಹೇಳಿದ್ದು, ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.
HEALTH TIPS: ನಿಮಗೆ ಮೂತ್ರದ ಸೋಂಕು ಕಾಡುತ್ತಿದ್ದೀಯಾ? ಅದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
ಕಳಸಾ ಬಂಡೂರಿ ಯೋಜನೆಗೆ ಕೇಂದ್ರದಿಂದ ‘ಗ್ರೀನ್ ಸಿಗ್ನಲ್’ : ಉತ್ತರ ಕರ್ನಾಟಕ ಜನರಿಗೆ ಮೋದಿ ಕೊಡುಗೆ ಎಂದ ಸಿಎಂ ಬೊಮ್ಮಾಯಿ