ಬೆಂಗಳೂರು : ವಿಕಲಚೇತನರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ವಿಕಲಚೇತನರ ಆರೋಗ್ಯಕ್ಕಾಗಿ ವಿಶೇಷ ಆರೋಗ್ಯ ವಿಮೆ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿಕಲಚೇತನರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಸಿಎಂ ಬೊಮ್ಮಾಯಿ, ವಿಕಲಚೇತನರ ಆರೋಗ್ಯಕ್ಕಾಗಿ 5 ಲಕ್ಷ ರೂ. ವಿಶೇಷ ಆರೋಗ್ಯ ವಿಮೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮುಂದಿನ ಬಜೆಟ್ ನಲ್ಲಿ ವಿಕಲಚೇತನ ವಿದ್ಯಾರ್ಥಿಗಳಿಗೆ ವಿಶೇಷ ಘೋಷಣೆ ಮಾಡಲಾಗುವುದು. ವಿಕಲಚೇತನರ ಆರೋಗ್ಯಕ್ಕಾಗಿ ವಿಶೇಷ ವಿಮೆ ನೀಡಲಾಗುವುದು. ಈ ವಿಮೆ ಯೋಜನೆಯಲ್ಲಿ ವಿಕಲಚೇತರು ಆಸ್ಪತ್ರೆಗೆ ಹೋದರೆ ಸರ್ಕಾರವೇ ವೆಚ್ಚ ಭರಿಸಲಿದೆ. ರಾಜ್ಯ ಸರ್ಕಾರದಿಂದ ವಸತಿ ಸ್ಕೀಂಗಳಲ್ಲಿ ಶೇ. 3 ರಷ್ಟು ಅಂಗವಿಕಲರಿಗೆ ನೀಡಲು ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.
ಅಂಗವಿಕಲರು ಧೈರ್ಯದಿಂದ ಯಶಸ್ವಿಯಾಗಿ ಬದುಕು ನಡೆಸಲು ಸರ್ಕಾರವು ಎಲ್ಲ ಸಹಕಾರ ನೀಡಲಿದೆ. ಸರ್ಕಾರ ನಿರ್ಮಿಸುವ ಮನೆಗಳಲ್ಲಿ ಅಂಗವಿಕಲರಿಗೆ ಶೇ. 3 ರಷ್ಟು ಮೀಸಲಾತಿಯನ್ನು ನೀಡಲಾಗುವುದು. ಬುದ್ದಿಮಾಂದ್ಯ ಮಕ್ಕಳಿಗೆ ಆಶ್ರಯ ಕಾರ್ಯಗಾರಗಳನ್ನು ಸ್ಥಾಪಿಸಲಾಗುವುದು. ಜೊತೆಗೆ ಅಂಗವಿಕಲರಿಗೆ ವಿದ್ಯುತ್ ಚಾಲಿತ 3 ಚಕ್ರದ ಸೈಕಲ್ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.