ಬೆಂಗಳೂರು : ಆಗಸ್ಟ್ 28ರಂದು ದೊಡ್ಡಬಳ್ಳಾಪುರ ದಲ್ಲಿ ಸರ್ಕಾರದ ಸಾಧನೆಯ ಜನೋತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
BIG NEWS: ಶೀಘ್ರವೇ ದೇಶದಲ್ಲಿ 5ಜಿ ಸೇವೆ ಕಾರ್ಯಾರಂಭ – ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ಇಂದು ಬೆಳಿಗ್ಗೆ ತಮ್ಮ ನಿವಾಸದ ಬಳಿ ಮಾಧ್ಯದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸಲು ರಾಜ್ಯದ ಐದು ಕಡೆಗಳಲ್ಲಿ ಜನೋತ್ಸವ ನಡೆಸಲಾಗುವುದೆಂದು ತಿಳಿಸಿದರು.
BIGG NEWS : ಸ್ವಾತಂತ್ರ್ಯ ಸಂಗ್ರಾಮ ಇತಿಹಾಸ ʼಇಂದಿನ ಯುವ ಸಮೂಹʼ ಅರಿತುಕೊಳ್ಳಬೇಕು : ಸಚಿವ ವಿ.ಸೋಮಣ್ಣ
ಜುಲೈ 28 ಕ್ಕೆ ಆಗಬೇಕಿದ್ದ ಜನೋತ್ಸವವನ್ನು ಅನಿವಾರ್ಯ ಕಾರಣಗಳಿಂದ ರದ್ದು ಮಾಡಲಾಗಿತ್ತು. 10 – 15 ದಿನಗಳಿಂದ ಈ ಭಾಗದ ಜನರ ಒತ್ತಾಯ ಹೆಚ್ಚಾಗಿದೆ. ಬೇರೆ ಕಡೆ ಸಮಾವೇಶ ಮಾಡಲು ಜನ ಒಪ್ಪಲಿಲ್ಲ. ನಾವು ಸಾಕಷ್ಟು ತಯಾರಿ ನಡೆಸಿದ್ದು ದೊಡ್ಡಬಳ್ಳಾಪುರ ದಿಂದಲೇ ಜನೋತ್ಸವ ಪ್ರಾರಂಭವಾಗಬೇಕು. ಮೊದಲ ಹೆಜ್ಜೆ ಇಟ್ಟಿದ್ದೇವೆ. ಇಲ್ಲಿಂದಲೇ ಜನೋತ್ಸವ ಆರಂಭ ಆಗಲಿ ಆಗಲಿ ಎಂದು ನಮಗಿಂತಲೂ ಹೆಚ್ಚಿನ ಧೃಢ ನಿರ್ಧಾರ ಅವರದಾಗಿದೆ. ಅವರ ಉತ್ಸಾಹ ನಿರ್ಣಯಕ್ಕೆ ತಲೆಬಾಗಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದರು.
ಜನೋತ್ಸವದ ಬಗ್ಗೆ ಇಂದು ವರಿಷ್ಠ ರೊಂದಿಗೆ ಮಾತನಾಡಿ ತಿಳಿಸಲಾಗುವುದು ಎಂದರು.
ಸಾರ್ವಜನಿಕರೇ ಎಚ್ಚರ ; ವಾಟ್ಸಾಪ್ನಲ್ಲಿ ‘ಬಿಲ್ ಕ್ಲಿಯರ್ ಮಾಡಿ’ ಅಂತಾ ಮೆಸೇಜ್ ಬಂದ್ರೆ ಹುಷಾರು.!